ಪುತ್ತೂರು: ನಗರದ ಹೊರವಲಯದ ಮುರ ಎಂಬಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.
ಖಾಸಗಿವಾಹಿನಿಯೊಂದರಲ್ಲಿ ಕ್ಯಾಮೆರಾಮೆನ್ ಆಗಿದ್ದ ಚೇತನ್ ಕೆಮ್ಮಿಂಜೆ ಮೃತಪಟ್ಟ ದುರ್ದೈವಿ.
ಮಾಣಿ - ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುರ ಎಂಬಲ್ಲಿ ಬೈಕ್ ಹಾಗೂ ಆಟೋ ರಿಕ್ಷಾ ಮಧ್ಯೆ ಈ ಅಪಘಾತ ಸಂಭವಿಸಿತ್ತು. ಬೈಕ್‌ನಲ್ಲಿ ಚೇತನ್‌ರೊಂದಿಗೆ ಬಾಲಕನೂ ಇದ್ದ ಎಂದು ತಿಳಿದು ಬಂದಿದೆ.
ಚೇತನ್ ಅವರು ನೆಹರೂ ನಗರದ ಮತಾವುನಲ್ಲಿರುವ ತನ್ನ ಸಂಬಂಧಿಕರ ಮನೆಗೆ ಬಂದಿದ್ದ. ಅಲ್ಲಿಯ ಬಾಲಕನನ್ನು ಅಂಗಡಿಗೆ ಕರೆದುಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಅಪಘಾತದ ತೀವ್ರತೆಗೆ ಸವಾರ ಹಾಗೂ ಬಾಲಕ ಇಬ್ಬರು ರಸ್ತೆಗೆ ಎಸೆಯಲ್ಪಟ್ಟಿದ್ದು, ಬಾಲಕ ಅಪಾಯದಿಂದ ಪಾರಾಗಿದ್ದಾರೆ. ಆದರೆ ಗಂಭೀರವಾಗಿ ಗಾಯಗೊಂಡ ಚೇತನ್ ಅವರನ್ನು ಪುತ್ತೂರು ಆಸ್ಪತ್ರೆಗೆ ಕೊಂಡೊಯ್ದರೂ ಅವರು ಅಷ್ಟರಲ್ಲಾಗಲೇ ಮೃತಪಟ್ಟಿದ್ದರು. ಬಾಲಕ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
PublicNext
05/02/2025 04:46 pm