", "articleSection": "Public News", "image": { "@type": "ImageObject", "url": "https://prod.cdn.publicnext.com/s3fs-public/39640520250205052451filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SundarChamarajnagar" }, "editor": { "@type": "Person", "name": "112068327297121593490" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಾಮರಾಜನಗರ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತ ರು ತಾಲೂಕಿನ ಪಣ್ಯದಹುಂಡಿಯಲ್ಲಿ...Read more" } ", "keywords": "Node,Chamarajnagar,Public-News", "url": "https://publicnext.com/node" } ಚಾಮರಾಜನಗರ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತಸಂಘ ಪ್ರತಿಭಟನೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಮರಾಜನಗರ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತಸಂಘ ಪ್ರತಿಭಟನೆ

ಚಾಮರಾಜನಗರ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತ ರು ತಾಲೂಕಿನ ಪಣ್ಯದಹುಂಡಿಯಲ್ಲಿ ಪ್ರತಿಭಟನೆ ನಡೆಸಿದರು.

ತಾಲೂಕಿನ ಪಣ್ಯದಹುಂಡಿ ಗ್ರಾಮದ ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕೆಲಕಾಲ ರಸ್ತೆಯಲ್ಲಿ ವಾಹನ ಸಂಚಾರ ತಡೆದು, ಜಿಲ್ಲಾಡಳಿತದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪಣ್ಯದಹುಂಡಿ, ಹೆಗ್ಗೋಠಾರ, ಮುತ್ತಿಗೆ ಸೇರಿದಂತೆ ಇನ್ನಿತರ ಗ್ರಾಮಗಳಿಗೆ ಸೇರಿದ ಅಂದಾಜು 250 ಹೆಕ್ಟರ್ ಸರ್ಕಾರಿ ಗೋಮಾಳವನ್ನು ಅತಿಕ್ರಮಣ ಮಾಡಿಕೊಂಡು ಗಣಿಗಾರಿಕೆ ನಡೆಸುತ್ತಿರುವ ಬಗ್ಗೆ ಹಲವು ವರ್ಷಗಳಿಂದ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಸಚಿವರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲಾಡಳಿತ ಕೂಡಲೇ ಸರ್ಕಾರಿ ಗೋಮಾಳಗಳಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ಭಾಗದ ರಸ್ತೆಗಳಲ್ಲಿ ಅಧಿಕ ಬಾರ ತುಂಬಿಕೊಂಡು ಸಚರಿಸುವ ಟಿಪ್ಪರ್‌ಗಳಿಂದ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿವೆ. ಮನೆಗಳು ಸಹ ಬಿರುಕು ಬಿಟ್ಟಿವೆ. ಅಲ್ಲದೇ ಜನರು ರಸ್ತೆಯಲ್ಲಿ ಭಯದಿಂದಲೇ ಓಡಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ಕ್ರಮವಹಿಸಬೇಕು. ಇಲ್ಲದ್ದಿದ್ದಲ್ಲಿ ಫೆ.7 ರಂದು ಜಿಲ್ಲೆಗೆ ಬರಲು ಅವಕಾಶ ನೀಡುವುದಿಲ್ಲ. ಹಾಗೂ ಸಚಿವ ಸಂಪುಟ ಸಭೆಯನ್ನು ಸಹ ಧಿಕ್ಕರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಹೈಕೋರ್ಟ್ ಆದೇಶವನ್ನು ಪಾಲಿಸಲು ಇಲ್ಲಿನ ಜಿಲ್ಲಾಡಳಿತ ಹಾಗೂ ಅಧಿಕಾರಿಗಳು ವಿಫಲವಾಗಿದೆ. ಹಾಗಾಗಿ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಅವರು ಆಗಮಿಸಿ ನಮ್ಮ ಅಹವಾಲನ್ನು ಸ್ವೀಕಾರ ಮಾಡಬೇಕು ಎಂದು ಪ್ರತಿಭಟನಾಕಾರರು ಪಟ್ಟುಹಿಡಿದರು.

ಸ್ಥಳಕ್ಕೆ ತಹಸೀಲ್ದಾರ್ ಅವರು ಆಗಮಿಸಿ ಗೋ ಮಾ ಳದಲ್ಲಿ ಗಣಿಗಾರಿಕೆ ನಿಷೇಧಿಸಲು ಜಿಲ್ಲಾಧಿಕಾರಿ ಆದೇಶ ನೀಡುತ್ತಿದ್ದಾರೆ ಹಾಗೂ ಟಿಪ್ಪರ್ ಉಪಟಳ ನಿಲ್ಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ತಹಸೀಲ್ದಾರರ ಸಮಜಾಯಿ ಷಿಗೆ ಸುಮ್ಮನಾಗದ ಪ್ರತಿಭಟನಾಕಾರರು, ಈ ಸಂಬಂಧ ಕೂಡಲೇ ಎರಡು ದಿನಗಳ ಒಳಗೆ ಆದೇಶ ನಮ್ಮ ಕೈ ಸೇರಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಬಸವಣ್ಣ, ಪ್ರಧಾನ ಕಾರ್ಯದರ್ಶಿ ಮೇಲಾಜಿಪುರ ಕುಮಾರ್, ಹೆಗ್ಗೊಠಾರ ವಿಜಯ್ ಕುಮಾರ್, ಪದಾಧಿಕಾರಿಗಳಾದ ಮರಿಸ್ವಾಮಪ್ಪ, ಶಿವಲಿಂಗೇಗೌಡ, ಮಾದಪ್ಪ, ಚಿನ್ನಸ್ವಾಮಿ, ನಾಗರಾಜಮೂರ್ತಿ, ಸ್ವಾಮಿ, ಸಂತೋಷ್, ಮಹೇಶ್, ಭಾಗ್ಯಮ್ಮ, ರೂಪ, ಕವಿತ, ಸವಿತ, ಶಾರದಮ್ಮ, ಪಾರ್ವತಿ, ಪವಿತ್ರ ಸೇರಿದಂತೆ ಇತರರು ಇದ್ದರು.

Edited By : PublicNext Desk
Kshetra Samachara

Kshetra Samachara

05/02/2025 05:22 pm

Cinque Terre

180

Cinque Terre

0

ಸಂಬಂಧಿತ ಸುದ್ದಿ