ಗದಗ : ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಇಲಾಖೆಯ ವತಿಯಿಂದ ಬುಧವಾರ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ರೇವಣಪ್ಪ ಮನಗೋಳ್ಳಿ ಅಧ್ಯಕ್ಷತೆಯಲ್ಲಿ ನೂತನ ಪದಾಧಿಕಾರಿಗಳಿಗೆ ಹಾಗೂ ಕೃಷಿಕ ಸಮಾಜದ ತಾಲೂಕು ಘಟಕ ಪದಾಧಿಕಾರಿಗಳಿಗೆ ಜಿಲ್ಲಾ ಅಧ್ಯಕ್ಷರಿಗೆ ಸನ್ಮಾನಿಸಲಾಯಿತು.
ಲಕ್ಷ್ಮೇಶ್ವರ ತಾಲೂಕು ಘಟಕದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಹೇಶ ಹೊಗೆಸೊಪ್ಪಿನ ಉಪಾಧ್ಯಕ್ಷರಾದ ಫಕ್ಕೀರಗೌಡ ಅಜ್ಜನಗೌಡರ ಪ್ರಧಾನ ಕಾರ್ಯದರ್ಶಿ ಸಿದ್ಧಲಿಂಗೇಶ್ವರ ರಗಟಿ ಕಜಾಚಿ ಬಸವರಾಜ ರಾಜೇಂದ್ರಪ್ಪ ಇಟಗಿ ಹಾಗೂ ಗದಗ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ವಿರೇಂದ್ರಗೌಡ ಪಾಟೀಲ್ ಇವರನ್ನು ಹಾಗೂ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಅಧ್ಯಕ್ಷ ವಿರೇಂದ್ರಗೌಡ ಪಾಟೀಲ ಹಾಗೂ ತಾಲೂಕು ಅಧ್ಯಕ್ಷ ಮಹೇಶ ಹೊಗೆಸೊಪ್ಪಿನ ಅವರು ತಾಲೂಕಿನಲ್ಲಿ ಕೃಷಿಕರ ಸಮಸ್ಯೆಗಳ ಬಗ್ಗೆ ಹಾಗೂ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೃಷಿಕ ಸಮಾಜದ ಆಡಳಿತ ಭವನ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದು ಮತ್ತು ತಾಲೂಕಿನಲ್ಲಿ ಪ್ರಮುಖವಾಗಿ ಮಣ್ಣು ಪರೀಕ್ಷಾ ಕೇಂದ್ರ ತೆರೆಯಲು ಕೃಷಿ ಇಲಾಖೆಗೆ ಒತ್ತಾಯಿಸಲು ಕ್ರಮ ಕೈಗೊಳ್ಳುವದಾಗಿ ಹೇಳಿದರು.
Kshetra Samachara
05/02/2025 05:31 pm