", "articleSection": "Public News", "image": { "@type": "ImageObject", "url": "https://prod.cdn.publicnext.com/s3fs-public/39640520250205055843filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SundarChamarajnagar" }, "editor": { "@type": "Person", "name": "112068327297121593490" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ಮುಂಟೀಪುರ ಗ್ರಾಮದಲ್ಲಿ ತಾಯಿ ಹುಲಿ ಮತ್ತು ಎರಡು ಮರಿಹುಲಿಗಳು ಸೇರಿದಂತೆ ಮೂರು ಹುಲಿಗಳು ಕಾಣಿಸಿಕೊಂಡು ಗ...Read more" } ", "keywords": "Node,Chamarajnagar,Public-News", "url": "https://publicnext.com/node" }
ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ಮುಂಟೀಪುರ ಗ್ರಾಮದಲ್ಲಿ ತಾಯಿ ಹುಲಿ ಮತ್ತು ಎರಡು ಮರಿಹುಲಿಗಳು ಸೇರಿದಂತೆ ಮೂರು ಹುಲಿಗಳು ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಉಂಟು ಮೂಡಿದೆ.
ಮುಂಟೀಪುರ- ಮುಖಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಸೇತುವೆ ಬಳಿ ಬುಧವಾರ ಬೆಳಗ್ಗಿನ ಜಾವ ಮೂರು ಹುಲಿಗಳು ಕಾಣಿಸಿಕೊಂಡಿರುವುದನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.
ಮುಂಟೀಪುರ ಗ್ರಾಮದ ಜನವಸತಿ ಪ್ರದೇಶದಿಂದ ಕೇವಲ 300 ಮೀಟರ್ ದೂರದಲ್ಲಿ ಮೂರು ಹುಲಿಗಳು ಕಾಣಿಸಿಕೊಂಡಿರುವುದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಇದರಿಂದ ಕೃಷಿ ಚಟುವಟಿಕೆಗಳಿಗೆ ತೆರಳಲು ಹಿಂದೇಟು ಹಾಕುತಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಮುಂಟೀಪುರ ಗ್ರಾಮದಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಕುರಿ ಮತ್ತು ಮೇಕೆಗಳು ನಾಪತ್ತೆಯಾಗಿದ್ದು, ಹುಲಿ ದಾಳಿಗೆ ಮೇಕೆಗಳು ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಗ್ರಾಮದ ಅಸುಪಾಸಿನಲ್ಲೆ ಮೂರು ಹುಲಿಗಳು ಕಾಣಿಸಿಕೊಂಡಿರುವುದು ಜನ ಮತ್ತು ಜಾನುವಾರುಗಳ ಮೇಲೆ ದಾಳಿ ಮಾಡುವ ಸಾಧ್ಯತೆ ಇರುವುದರಿಂದ ಅರಣ್ಯ ಇಲಾಖೆಯವರು ಕೂಡಲೇ ಹುಲಿಯನ್ನು ಸೆರೆ ಹಿಡಿದು ಬೇರಡೆಗೆ ಸ್ಥಳಾಂತರ ಮಾಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
Kshetra Samachara
05/02/2025 05:56 pm