", "articleSection": "Politics,Infrastructure", "image": { "@type": "ImageObject", "url": "https://prod.cdn.publicnext.com/s3fs-public/378325-1738759978-10.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PralhadBGM" }, "editor": { "@type": "Person", "name": "somashekar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಳಗಾವಿ: ಈ ಬಾರಿ ಭರತ ಹುಣ್ಣಿಮೆ ವೇಳೆ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಜಿಲ್ಲಾಡಳಿತ ವತಿಯಿಂದ ಜನಸಂದಣಿ ನಿರ್ವಹಣೆಗೆ ಪಾರ್ಕಿಂಗ್, ಶೌಚಾಲಯ, ಎ...Read more" } ", "keywords": "Belagavi, Bharat Hunnime, Yellamma Devi Fair, Yellammagudda Hill, Saundatti, Minister HK Patil, Karnataka News, Belagavi News, Hindu Festivals, Shakti Puja, Devadasi Tradition,Belgaum,Politics,Infrastructure", "url": "https://publicnext.com/node" } ಬೆಳಗಾವಿ: ಭರತ ಹುಣ್ಣಿಮೆ ವೇಳೆ ಯಲ್ಲಮ್ಮ ಗುಡ್ಡದಲ್ಲಿ ಸಕಲ ವ್ಯವಸ್ಥೆ- ಸಚಿವ ಎಚ್ಕೆ ಪಾಟೀಲ್ ಭರವಸೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಭರತ ಹುಣ್ಣಿಮೆ ವೇಳೆ ಯಲ್ಲಮ್ಮ ಗುಡ್ಡದಲ್ಲಿ ಸಕಲ ವ್ಯವಸ್ಥೆ- ಸಚಿವ ಎಚ್ಕೆ ಪಾಟೀಲ್ ಭರವಸೆ

ಬೆಳಗಾವಿ: ಈ ಬಾರಿ ಭರತ ಹುಣ್ಣಿಮೆ ವೇಳೆ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಜಿಲ್ಲಾಡಳಿತ ವತಿಯಿಂದ ಜನಸಂದಣಿ ನಿರ್ವಹಣೆಗೆ ಪಾರ್ಕಿಂಗ್, ಶೌಚಾಲಯ, ಎಲ್.ಇ.ಡಿ. ಸ್ಕ್ರೀನ್ ಅಳವಡಿಕೆ ಸೇರಿದಂತೆ ಸಕಲ ವ್ಯವಸ್ಥೆ ಮಾಡಲಾಗುತ್ತದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.‌

ಇಂದು ಡಿಸಿ ಕಚೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಾಸೋಹ ಭವನ ಮತ್ತು ಮೇವು ದಾಸೋಹ ಭವನ ನಿರ್ಮಾಣಕ್ಕೆ ಒಂದು ತಿಂಗಳಿನಲ್ಲಿ ಶಂಕುಸ್ಥಾಪನೆ ಮಾಡಲು ಪ್ರಯತ್ನಿಸಲಾಗುತ್ತಿದೆ. ಪವಿತ್ರ ಗುಡ್ಡದ ಅಭಿವೃದ್ಧಿಗೆ ಟಿಟಿಡಿ ಮಾದರಿಯಲ್ಲಿ ಅಭಿವೃದ್ಧಿಯನ್ನು ಮಾದರಿಯಾಗಿಟ್ಟುಕೊಂಡು ಯೋಜನೆ ರೂಪಿಸಲಾಗುವುದು.‌ ಸವದತ್ತಿ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನೆ, ಸಣ್ಣಪುಟ್ಟ ಕಾನೂನಾತ್ಮಕ ಸಮಸ್ಯೆಗಳನ್ನು ಜಿಲ್ಲಾಡಳಿತ ಬಗೆಹರಿಸಿದೆ ಎಂದರು.

ಕೇಂದ್ರದಿಂದ ನೂರು ಕೋಟಿ ಮಂಜೂರಾಗಿದೆ. ಇದು ಮಾತ್ರವಲ್ಲದೇ 20 ಕೋಟಿ ಪ್ರಸಾದ ಯೋಜನೆಯಡಿ ಮಂಜೂರಾಗಿದೆ. ಇದಲ್ಲದೇ ರಾಜ್ಯ ಸರಕಾರದಿಂದ ಕೂಡ ಸಾಕಷ್ಟು ಅನುದಾನ ನೀಡಲಾಗುತ್ತಿದೆ. ವಸತಿ ಗೃಹ, ದಾಸೋಹ ಭವನ, ಮೂಲಸೌಕರ್ಯಗಳನ್ನು ಒಳಗೊಂಡ ಮಾಸ್ಟರ್ ಪ್ಲ್ಯಾನ್ ಬಹುತೇಕ ಸಿದ್ಧಗೊಂಡಿದೆ. ವೆಬ್ ಸೈಟ್ ನಲ್ಲೂ ಪ್ಲ್ಯಾನ್ ಪ್ರಕಟಿಸಿ ಸಾರ್ವಜನಿಕರಿಂದ ಸಲಹೆಗಳನ್ನು ಸ್ವೀಕರಿಸಲಾಗುವುದು.

ದಾಸೋಹ ಭವನ ನಿರ್ಮಾಣದ ನಂತರ ದಾಸೋಹ ಆರಂಭಿಸಲಾಗುವುದು. ಸವದತ್ತಿ ಗುಡ್ಡದಲ್ಲಿ ಬಯಲು ಶೌಚಾಲಯ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸಲಾಗುವುದು ಎಂದು ಹೇಳಿದರು.

Edited By : Somashekar
PublicNext

PublicNext

05/02/2025 06:23 pm

Cinque Terre

9.01 K

Cinque Terre

0

ಸಂಬಂಧಿತ ಸುದ್ದಿ