", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/378325-1738760458-12.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PralhadBGM" }, "editor": { "@type": "Person", "name": "somashekar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಳಗಾವಿ : ಬಹಳ ದಿನಗಳಿಂದ ಸ್ಥಳದ ಕೊರತೆಯಿತ್ತು ಹಾಗಾಗಿ ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಖಾಯಂ ಸಂಚಾರಿ ಪೀಠ ಪ್ರಾರಂಭ ವಿ...Read more" } ", "keywords": "Sanchari Peetha Office, Minister Satish Jarkiholi, Essential Facilities, Karnataka News, Belagavi News, Indian Politics, Government Offices, Infrastructure Development ,Belgaum,Politics", "url": "https://publicnext.com/node" }
ಬೆಳಗಾವಿ : ಬಹಳ ದಿನಗಳಿಂದ ಸ್ಥಳದ ಕೊರತೆಯಿತ್ತು ಹಾಗಾಗಿ ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಖಾಯಂ ಸಂಚಾರಿ ಪೀಠ ಪ್ರಾರಂಭ ವಿಳಂಬವಾಗುತ್ತಿತ್ತು. ಈಗ ಪ್ರಾರಂಭವಾದ ಸಂಚಾರಿ ಪೀಠದ ಕಚೇರಿಗೆ ಬೇಕಾಗುವ ಅವಶ್ಯಕ ಪೀಠೋಪಕರಣ, ಸಿಬ್ಬಂದಿ ನೇಮಕ, ಅಗತ್ಯ ಸವಲತ್ತುಗಳನ್ನು ಒದಗಿಸಲಾಗುವುದು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಬೆಂಗಳೂರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆ ಬೆಂಗಳೂರು, ಜಿಲ್ಲಾಡಳಿತ ಮತ್ತು ಜಿಲ್ಲಾ ನ್ಯಾಯವಾದಿಗಳ ಸಂಘ ಬೆಳಗಾವಿ ಇವರ ಸಂಯುಕ್ತಾಶ್ರಯದಲ್ಲಿ ಆಟೋ ನಗರದ ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳ ನಿಯಮಿತ ಕಟ್ಟಡದ 3ನೇ ಮಹಡಿಯ ಕೆ.ಎಚ್.ಪಾಟೀಲ ಸಭಾ ಭವನದಲ್ಲಿ ಇಂದು ನಡೆದ ನೂತನ “ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಖಾಯಂ ಸಂಚಾರಿ ಪೀಠದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಇಲ್ಲಿನ ಗ್ರಾಹಕರು ನ್ಯಾಯಕ್ಕಾಗಿ ಬೆಂಗಳೂರಿಗೆ ಹೋಗುವ ಸಂದರ್ಭ ಇತ್ತು.
ಈ ಖಾಯಂ ಸಂಚಾರಿ ಪೀಠ ಆರಂಭ ಗ್ರಾಹಕರಿಗೆ ಸಂತಸದ ವಿಷಯವಾಗಿದೆ. ಕಳೆದ 4 ವರ್ಷಗಳಿಂದ ಖಾಯಂ ಪೀಠ ಪ್ರಾರಂಭಿಸುವ ಬಗ್ಗೆ ಹೋರಾಟವಿತ್ತು ಅದರಂತೆ ಇಂದು ಸಂಚಾರಿ ಪೀಠ ಉದ್ಘಾಟನೆಗೊಳ್ಳುತ್ತಿದೆ.
ಬೆಂಗಳೂರು ಮಾದರಿಯಲ್ಲಿ ಬೆಳಗಾವಿ ಜಿಲ್ಲೆ ದೊಡ್ಡದಾಗಿ ಬೆಳೆಯುತ್ತಿದೆ. ಮುಂದಿನ ದಿನಗಳಲ್ಲಿ ಈ ಭಾಗದ ಇನ್ನಷ್ಟು ಅಭಿವೃದ್ಧಿಗೆ ಸರ್ಕಾರ ಅನೇಕ ಸವಲತ್ತುಗಳನ್ನು ಕಲ್ಪಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.
PublicNext
05/02/2025 06:31 pm