", "articleSection": "Politics,Law and Order,Government,News,Public News", "image": { "@type": "ImageObject", "url": "https://prod.cdn.publicnext.com/s3fs-public/421698-1738760610-A6~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Mallesh Suranagi" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹುಬ್ಬಳ್ಳಿ: ರಸ್ತೆ ಸುರಕ್ಷತೆ ಕುರಿತು ಸಮಾಜದಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ. ರಸ್ತೆ ಅಪಘಾತ ಪ್ರಮಾಣವನ್ನು ಶೂನ್ಯ ಮಾಡುವ ಜವಾಬ್ದಾರಿ ನ...Read more" } ", "keywords": ",Hubballi-Dharwad,Politics,Law-and-Order,Government,News,Public-News", "url": "https://publicnext.com/node" }
ಹುಬ್ಬಳ್ಳಿ: ರಸ್ತೆ ಸುರಕ್ಷತೆ ಕುರಿತು ಸಮಾಜದಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ. ರಸ್ತೆ ಅಪಘಾತ ಪ್ರಮಾಣವನ್ನು ಶೂನ್ಯ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅಭಿಪ್ರಾಯ ವ್ಯಕ್ತಪಡಿಸಿದರು.
ಹುಬ್ಬಳ್ಳಿಯ ವಿದ್ಯಾನಗರದ ಬಿ.ವಿ.ಬಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ, ಸಾರಿಗೆ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ, ಹುಬ್ಬಳ್ಳಿ ಧಾರವಾಡ ಮೋಟಾರು ಡ್ರೈವಿಂಗ್ ಸ್ಕೂಲ್ ಅಸೋಸಿಯೇಶನ್, ವಾಯು ಮಾಲಿನ್ಯ ಪರೀಕ್ಷಣಾ ಕೇಂದ್ರ ಪ್ರವರ್ತಕರು, ಕೆ.ಎಲ್.ಇ. ಟೆಕ್ನಾಲಾಜಿಕಲ್ ಯುನಿವರ್ಸಿಟಿ ಹುಬ್ಬಳ್ಳಿ ಹಾಗೂ ಹುಬ್ಬಳ್ಳಿ ಮೋಟಾರು ವಾಹನ ಡೀಲರ್ಸ್ ಇವುಗಳ ಸಹಯೋಗದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಜಾಗೃತಿ ಮಾಸಾಚರಣೆ- 2025 ಅಂಗವಾಗಿ ಆಯೋಜಿಸಲಾಗಿದ್ದ ಬೈಕ್ ಹಾಗೂ ಕಾರು ರ್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ದೇಶದಲ್ಲಿ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವ ಯುವಕರ ಸಂಖ್ಯೆ ಹೆಚ್ಚಿದೆ. ದೇಶದಲ್ಲಿ ಶೇ. 22 ರಷ್ಟು ಯುವಕರು ರಸ್ತೆ ಅಪಘಾತಕ್ಕೆ ತುತ್ತಾಗುತ್ತಿದ್ದಾರೆ. ಪ್ರತಿದಿನ 280 ಜನರು ಸಾವಿಗೀಡಾಗುತ್ತಿದ್ದಾರೆ. ಇದರಿಂದ ದೇಶದ ಶೇ.1 ರಷ್ಟು ಜಿಡಿಪಿಗೆ ಮಾರಕವಾಗಲಿದೆ. ಅಲ್ಲದೇ ಕುಟುಂಬಕ್ಕೆ ಆರ್ಥಿಕವಾಗಿ ಬಹಳ ದೊಡ್ಡ ಹೊಡೆತ ಬೀಳಲಿದೆ. ಕುಟುಂಬವು ಉತ್ತಮ ಜೀವನ ನಡೆಸಲು ಹಲವು ವರ್ಷಗಳು ಬೇಕಾಗುತ್ತದೆ. ಯುವಕರು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು. ಸಂಚಾರ ನಿಯಮಗಳನ್ನು ಪಾಲಿಸುವುದರಿಂದ ಪ್ರಾಣ ಹಾನಿ ಉಂಟಾಗುವುದಿಲ್ಲ ಎಂದು ಅವರು ತಿಳಿಸಿದರು.
ಅವಸರದ ಪ್ರಯಾಣ, ವ್ಹೀಲಿಂಗ್ ಮಾಡುವುದು, ಮದ್ಯಪಾನ ಮಾಡಿ ವಾಹನ ಚಲಾಯಿಸುವುದು, ಸಂಚಾರ ನಿಯಮಗಳನ್ನು ಪಾಲಿಸದೇ ಇರುವುದು, ಸೀಟ್ ಬೆಲ್ಟ್ ಹಾಗೂ ಹೆಲ್ಮೆಟ್ ಧರಿಸದಿರುವುದು ಅಪಘಾತಕ್ಕೆ ದಾರಿಯಾಗಿವೆ. ರಸ್ತೆ ಸುರಕ್ಷತಾ ಹಾಗೂ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಎಲ್ಲರೂ ಪಾಲನೆ ಮಾಡಬೇಕು ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
05/02/2025 06:33 pm