", "articleSection": "News", "image": { "@type": "ImageObject", "url": "https://prod.cdn.publicnext.com/s3fs-public/40083620250205071229filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "VeereshChikkamangaluru" }, "editor": { "@type": "Person", "name": "9731141698" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿವಮೊಗ್ಗ : ಮೆದುಳು ಜ್ವರಕ್ಕೆ ಹೆಚ್ಚಾಗಿ ಮಕ್ಕಳು ತುತ್ತಾಗುತ್ತಾರೆ. ಈ ರೋಗ ತಗುಲಿದ ಶೇ.30 ರಿಂದ 50 ರಷ್ಟು ಮಕ್ಕಳು ಮರಣ ಹೊಂದುವ ಸಂಭವ ಇರುವು...Read more" } ", "keywords": "Node,Shimoga,News", "url": "https://publicnext.com/node" }
ಶಿವಮೊಗ್ಗ : ಮೆದುಳು ಜ್ವರಕ್ಕೆ ಹೆಚ್ಚಾಗಿ ಮಕ್ಕಳು ತುತ್ತಾಗುತ್ತಾರೆ. ಈ ರೋಗ ತಗುಲಿದ ಶೇ.30 ರಿಂದ 50 ರಷ್ಟು ಮಕ್ಕಳು ಮರಣ ಹೊಂದುವ ಸಂಭವ ಇರುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಡಿಹೆಚ್‌ಓ ಡಾ.ನಟರಾಜ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯತ್ರಂಣ ಕಾರ್ಯಕ್ರಮ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ವೈದ್ಯರುಗಳಿಗೆ ಏರ್ಪಡಿಸಲಾಗಿದ್ದ ಮೆದುಳು ಜ್ವರ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು ಮೆದುಳು ಜ್ವರ ವೈರಾಣುವಿನಿಂದ ಉಂಟಾಗುವ ರೋಗ.
ಈ ರೋಗವು ಸೋಂಕಿರುವ ಹಂದಿಗಳು, ಹಂಸ ಪಕ್ಷಿಗಳಿಂದ ಕ್ಯುಲೆಕ್ಸ್ ಜಾತಿಯ ಸೊಳ್ಳೆಗಳ ಮೂಲಕ ಹರಡುತ್ತದೆ. ಮಾನವನಿಗೆ ಇದು ಆಕಸ್ಮಿಕವಾಗಿ ತಗಲುತ್ತದೆ. ಈ ರೋಗಕ್ಕೆ ಹೆಚ್ಚಾಗಿ ಮಕ್ಕಳು ತುತ್ತಾಗುತ್ತಾರೆ. ಮುನ್ನೆಚ್ಚರಿಕೆ ಕ್ರಮಗಳಿಂದ ಈ ರೋಗವನ್ನು ನಿಯಂತ್ರಿಸಬಹುದು. ಆದ್ದರಿಂದ ಎಲ್ಲರೂ ಮುನ್ನಚ್ಚರಿಕೆ ವಹಿಸಬೇಕು ಎಂದರು.
Kshetra Samachara
05/02/2025 07:12 pm