ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ : ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪ್ರಾಯೋಗಿಕ ಕಲಿಕೆ ಕಾರ್ಯಕ್ರಮ

ಶಿವಮೊಗ್ಗ : ಭಾರತ ಸರ್ಕಾರ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ಮೈಭಾರತ್, ಮಹಾನಗರ ಪಾಲಿಕೆಜಿಲ್ಲಾ ನಗರಾಭಿವೃದ್ಧಿ ಕೋಶ, ನೆಹರು ಯುವ ಕೇಂದ್ರ ಹಾಗೂ ಸಹ್ಯಾದ್ರಿ ಕಲಾ ಕಾಲೇಜು, ಸಮಾಜಕಾರ್ಯ ವಿಭಾಗ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಪಾಲಿಕೆಯಲ್ಲಿ ಹಮ್ಮಿಕೊಳ್ಳಲಾಗಿರುವ ಸಮುದಾಯಕ್ಕೆ ಪ್ರಾಮುಖ್ಯತೆಯಿರುವ ಅನೇಕ ಕ್ಷೇತ್ರಗಳಲ್ಲಿ ಯುವಜನರಿಗೆ ಸ್ವಯಂಸೇವಕ ಅವಕಾಶಗಳಿಗಾಗಿ 15 ದಿನಗಳ ಕಾಲ ಶಿವಮೊಗ್ಗ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪ್ರಾಯೋಗಿಕ ಕಲಿಕೆ ಕಾರ್ಯಕ್ರಮಕ್ಕೆ ಪಾಲಿಕೆಯ ಆಯುಕ್ತರಾದ ಡಾ.ಕವಿತ ಯೋಗಪ್ಪನವರ್ ಮತ್ತು ಜಿಲ್ಲಾ ನಗರಾಭಿವೃದ್ಧಿ ಕೋಶದ ಕಾರ್ಯಕ್ರಮ ನಿರ್ದೇಶಕರಾದ ರಂಗಸ್ವಾಮಿ.ಕೆ ರವರು ಯುವಜನರಿಗೆ ಮೈಭಾರತ್ ಕಿಟ್‌ನ್ನು ನೀಡುವುದರ ಮೂಲಕ ಚಾಲನೆ ನೀಡಿದರು.

ಇಂದು ಕಲಿಕೆ ಕಾರ್ಯಕ್ರದಲ್ಲಿ ನಗರಾಭಿವೃದ್ಧಿ ಕೋಶದ ಪ್ರಸಾದ್ ಮಾತನಾಡಿ, ಪುರಸಭೆಯ ಆಡಳಿತ ಕಾರ್ಯಗಳಾದ ಪುರಸಭೆಗಳ ರಚನೆ, ಅದರ ಪಾತ್ರಗಳು ಮತ್ತು ಜವಾಬ್ದಾರಿಗಳು, ಕೌನ್ಸಿಲ್ ಸಂಸ್ಥೆಗಳು, ಆರ್.ಟಿ.ಐ ಬಗ್ಗೆ ಸಂಬAಧಿಸಿದ ಮಾಹಿತಿಗಳನ್ನು ವಿವರವಾಗಿ ತಿಳಿಸಿದರು.

ಪ್ರಾಯೋಗಿಕ ಕಲಿಕೆ ಕಾರ್ಯಕ್ರಮದ ಮುಂದಿನ ದಿನಗಳಲ್ಲಿ ಯುವ ಜನರಿಗೆ ವಿವಿಧ ಸಂಸ್ಥೆಗಳಿಗೆ ಸಂಬAಧಿಸಿದAತೆ, ಆದಾಯ ತೆರಿಗೆ ಇಲಾಖೆಗೆ ಸಂಬಂಧಿಸಿದ ಅಂಶಗಳಾದ ಖಾತಾ ಸಂಬಂಧಿತ, ತೆರಿಗೆ, ಅನುಮತಿ ಮತ್ತು ಕಾರ್ಯವಿಧಾನ, ನೀರಿನ ನಿರ್ವಹಣೆ, ಘನ ತ್ಯಾಜ್ಯ ನಿರ್ವಹಣೆ, ಕಲ್ಯಾಣ ಯೋಜನೆಗಳು ಮತ್ತು ಕಾರ್ಯಕ್ರಮಗಳು ವಸತಿ ಯೋಜನೆಗಳು ಮತ್ತು ಕಾರ್ಯಕ್ರಮಗಳು, ಲೆಕ್ಕ ಪರಿಶೋಧನೆಗೆ ಸಂಬಂಧಿಸಿದ ಮಾಹಿತಿಗಳು, ಜಿಎಸ್‌ಟಿ ಮುಂತಾದ ವಿಷಯಗಳ ಬಗ್ಗೆ, ಮಾಹಿತಿ ತಂತ್ರಜ್ಞಾನದ ಬಗ್ಗೆ ಇನ್ನು ಹಲವಾರು ವಿಷಯಗಳ ಕುರಿತಾದ ಮಾಹಿತಿ ನೀಡಲಾಗುವುದು ಎಂದರು.

ನೆಹರು ಯುವ ಕೇಂದ್ರದ ಯುವ ಅಧಿಕಾರಿ ಉಲ್ಲಾಸ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಐ.ಟಿ ನೋಡಲ್ ಅಧಿಕಾರಿ ಸುದೀಪ್ ಹಾಗೂ ಸಹ್ಯಾದ್ರಿ ಕಲಾ ಕಾಲೇಜಿನ ಉಪನ್ಯಾಸಕರಾದ ಗೌರಿಶಂಕರ್ ರವರು ಉಪಸ್ಥಿತರಿದ್ದರು.

Edited By : Abhishek Kamoji
Kshetra Samachara

Kshetra Samachara

05/02/2025 07:55 pm

Cinque Terre

1.32 K

Cinque Terre

0

ಸಂಬಂಧಿತ ಸುದ್ದಿ