", "articleSection": "Politics,Government,Public Feed", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/392696_1738767437_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PralhadBGM" }, "editor": { "@type": "Person", "name": "8904774317" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಳಗಾವಿ: ಬಡ ಜನರ ಶ್ರೇಯೋಭಿವೃದ್ಧಿಗಾಗಿ ರಾಜ್ಯ ಸರಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳು ದೊರಕಬೇಕು. ಪ...Read more" } ", "keywords": "Node,Belgaum,Politics,Government,Public-Feed", "url": "https://publicnext.com/node" } ಬೆಳಗಾವಿ: ಮಾರ್ಗಸೂಚಿಗಳನ್ವಯ ಪಡಿತರ ಚೀಟಿ‌ ಪರಿಷ್ಕರಣೆಯಾಗಲಿ - ಸಚಿವ ಕೆ.ಎಚ್.ಮುನಿಯಪ್ಪ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಮಾರ್ಗಸೂಚಿಗಳನ್ವಯ ಪಡಿತರ ಚೀಟಿ‌ ಪರಿಷ್ಕರಣೆಯಾಗಲಿ - ಸಚಿವ ಕೆ.ಎಚ್.ಮುನಿಯಪ್ಪ

ಬೆಳಗಾವಿ: ಬಡ ಜನರ ಶ್ರೇಯೋಭಿವೃದ್ಧಿಗಾಗಿ ರಾಜ್ಯ ಸರಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳು ದೊರಕಬೇಕು. ಪಡಿತರ ಚೀಟಿ ಪರಿಷ್ಕರಣೆಗೆ ಹೊರಡಿಸಲಾಗಿರುವ ಮಾರ್ಗಸೂಚಿಗಳ ಪ್ರಕಾರ ಪಡಿತರ ಚೀಟಿಗಳ ಪರಿಷ್ಕರಣೆಗೆ ಕ್ರಮ ಕೈಗೊಳ್ಳುವಂತೆ ಆಹಾರ‌ ಮತ್ತು ನಾಗರಿಕ‌ ಸರಬರಾಜು ಇಲಾಖೆ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಅಧಿಕಾರಿಗಳಿಗೆ ತಿಳಿಸಿದರು.

ಇಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ‌ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ಆಹಾರ ಇಲಾಖಾ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯ ನಿರ್ವಹಿಸಬೇಕು. ಪಡಿತರ ಚೀಟಿ ಪರಿಷ್ಕರಣೆ ಸಂದರ್ಭದಲ್ಲಿ ಅರ್ಹ ಬಿ.ಪಿ.ಎಲ್‌. ಪಡಿತರ ಚೀಟಿದಾರರಿಗೆ ತೊಂದರೆ ಅಗದಂತೆ ನಿಗಾವಹಿಸುವದರ ಜೊತೆಗೆ ಅನರ್ಹ ಬಿ.ಪಿ.ಎಲ್ ಕಾರ್ಡಗಳನ್ನು‌ ಪತ್ತೆ ಹಚ್ಚಲು ಇಲಾಖಾ ಅಧಿಕಾರಿಗಳು, ಸಿಬ್ಬಂದಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ತಿಳಿಸಿದರು.

ಬೆಳಗಾವಿ ಕಂದಾಯ ವಿಭಾಗದಲ್ಲಿ ಅಂದಾಜು 13 ಲಕ್ಷ ಫಲಾನುಭವಿಗಳು ಈ-ಕೆವೈಸಿ ನೀಡದೆ‌ ಪಡಿತರ ಪಡೆದಿರುವುದಿಲ್ಲ ಅಂತಹ ಫಲಾನುಭವಿಗಳನ್ನು ಗುರುತಿಸಿ ಅಂತಹವರ‌ ವಿವರಗಳನ್ನು ಆಯಾ ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರಚುರಪಡಿಸಿ ವರದಿ ನೀಡಬೇಕು. ಫೆ.20ರೊಳಗಾಗಿ ಎಲ್ಲ‌ ನ್ಯಾಯಬೆಲೆ‌‌ ಅಂಗಡಿಗಳಲ್ಲಿ ಥರ್ಮಲ‌್ ಪ್ರಿಂಟರಗಳನ್ನು‌‌ ಅಳವಡಿಸಲು‌ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಆಹಾರ ಧಾನ್ಯಗಳನ್ನು ಸರಬರಾಜು ಮಾಡುವಂತಹ ಲಾರಿಗಳಿಗೆ ಜಿ.ಪಿ.ಎಸ್ ಅಳವಡಿಸುವುದು ಕಡ್ಡಾಯವಾಗಿದ್ದು ಈ ಕುರಿತು ಅಧಿಕಾರಿಗಳು‌ ಪರಿಶೀಲಿಸಬೇಕು.

ಬೆಂಬಲ ಬೆಲೆ‌ ಯೋಜನೆ‌ ಅಡಿ ತೆರೆಯಲಾದ ಖರೀದಿ‌‌‌‌‌ ಕೇಂದ್ರಗಳಲ್ಲಿ ನಿಯಮಾನುಸಾರ ಆಹಾರ ಧಾನ್ಯಗಳನ್ನು ಖರೀದಿಸಲಾಗುತ್ತಿರುವ‌ ಕುರಿತು ಪರಿಶೀಲಿಸಬೇಕು. ಸರ್ಕಾರ ನಿಗದಿ‌ ಪಡಿಸಿದ ದರದಂತೆ ಬೆಂಬಲ ಬೆಲೆ‌ಯಡಿ ಖರೀದಿಸಬೇಕು ಈ ಯೋಜನೆಯಡಿ ಯಾವುದೇ ಅವ್ಯವಹಾರಗಳು ನಡೆಯದಂತೆ ನಿಗಾವಹಿಸಲು ತಿಳಿಸಿದರು.

ಆಹಾರ ಮತ್ತು‌ ನಾಗರಿಕ ಸರಬರಾಜು ನಿಗಮದ ಅಧೀನದಲ್ಲಿ ಇರುವಂತಹ ಗೋದಾಮುಗಳನ್ನು ನಿಯಮಿತವಾಗಿ ಪರಿಶೀಲಿಸಿ ಅವಶ್ಯಕತೆಗಿಂತ ಹೆಚ್ಚಿನ ಆಹಾರ ಧಾನ್ಯ ಸಂಗ್ರಹವಾಗದಂತೆ ನಿಗಾವಹಿಸಲು ತಿಳಿಸಿದರು.

Edited By : PublicNext Desk
PublicNext

PublicNext

05/02/2025 08:27 pm

Cinque Terre

9.29 K

Cinque Terre

0

ಸಂಬಂಧಿತ ಸುದ್ದಿ