", "articleSection": "Politics,Government", "image": { "@type": "ImageObject", "url": "https://prod.cdn.publicnext.com/s3fs-public/387839-1738768598-WhatsApp-Image-2025-02-05-at-8.27.51-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Vishwanath" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮಂಗಳೂರು: ಹೆದ್ದಾರಿ ಹಾಗೂ ಮುಖ್ಯರಸ್ತೆಗಳಲ್ಲಿ ಬರುವ ನದಿಗಳಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಗಳ ಎರಡು ಬದಿಗಳಲ್ಲಿ ಸಿ.ಸಿ.ಟಿವಿ ಅಳವಡಿಸುವಂತೆ ಜ...Read more" } ", "keywords": "Mangaluru: Minister Dinesh Gundurao instructs to install CCTV near bridges,Mangalore,Politics,Government", "url": "https://publicnext.com/node" }
ಮಂಗಳೂರು: ಹೆದ್ದಾರಿ ಹಾಗೂ ಮುಖ್ಯರಸ್ತೆಗಳಲ್ಲಿ ಬರುವ ನದಿಗಳಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಗಳ ಎರಡು ಬದಿಗಳಲ್ಲಿ ಸಿ.ಸಿ.ಟಿವಿ ಅಳವಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದರು.
ಪೊಳಲಿ-ಅಡ್ಡೂರು ರಾಜ್ಯ ಹೆದ್ದಾರಿಯ ಸೇತುವೆಯ ಬಲಗೊಳಿಸುವ ಕಾಮಗಾರಿಯನ್ನು ವೀಕ್ಷಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೇತುವೆಗಳ ಆಸುಪಾಸಿನಲ್ಲಿ ಮರಳುಗಾರಿಕೆ ನಡೆಸುವುದರಿಂದ ಸೇತುವೆಗಳು ದುರ್ಬಲವಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿದೆ. ಆದ್ದರಿಂದ ಸೇತುವೆಗಳ ರಕ್ಷಣೆಗೆ ಅಡ್ಡೂರು ಸೇತುವೆ ಸೇರಿದಂತೆ ಎಲ್ಲಾ ಪ್ರಮುಖ ಸೇತುವೆಗಳ ಎರಡು ಬದಿಗಳಲ್ಲಿ ಸಿಸಿ ಟಿವಿ ಅಳವಡಿಸಿ ನಿರಂತರವಾಗಿ ನಿಗಾ ವಹಿಸುವಂತೆ ಸಚಿವರು ಸೂಚಿಸಿದರು.
ಅಡ್ಡೂರು ಸೇತುವೆ ಬಲಗೊಳಿಸುವ ಕಾಮಗಾರಿ ಸುಮಾರು 6.10 ಕೋಟಿ ರೂ. ವೆಚ್ಚದಲ್ಲಿ ನಡೆಯುತ್ತಿದೆ. ಇಲ್ಲಿ ಪ್ರತ್ಯೇಕವಾಗಿ ಹೊಸ ಸೇತುವೆ ನಿರ್ಮಿಸಬೇಕೆಂಬ ಸಾರ್ವಜನಿಕರ ಬೇಡಿಕೆ ಇದೆ. ಈ ನಿಟ್ಟಿನಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಲೋಕೋಪಯೋಗಿ ಇಲಾಖೆಗೆ ಸೂಚಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
Kshetra Samachara
05/02/2025 08:46 pm