", "articleSection": "Government", "image": { "@type": "ImageObject", "url": "https://prod.cdn.publicnext.com/s3fs-public/387839-1738768716-WhatsApp-Image-2025-02-05-at-8.30.47-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Vishwanath" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮಂಗಳೂರು: ನಗರದಲ್ಲಿ ಬಹುನಿರೀಕ್ಷಿತ ರಂಗಮಂದಿರ ನಿರ್ಮಾಣಕ್ಕೆ ಕಾಮಗಾರಿ ಪ್ರಕ್ರಿಯೆಗೆ ಚಾಲನೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾ...Read more" } ", "keywords": "Mangaluru: Minister in-charge instructed to start theater work process,Mangalore,Government", "url": "https://publicnext.com/node" }
ಮಂಗಳೂರು: ನಗರದಲ್ಲಿ ಬಹುನಿರೀಕ್ಷಿತ ರಂಗಮಂದಿರ ನಿರ್ಮಾಣಕ್ಕೆ ಕಾಮಗಾರಿ ಪ್ರಕ್ರಿಯೆಗೆ ಚಾಲನೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.
ರಂಗಮಂದಿರ ನಿರ್ಮಾಣ ಕುರಿತು ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ರಂಗಮಂದಿರ ನಿರ್ಮಾಣ ಸಂಬಂಧ 9.95 ಕೋಟಿ ರೂ. ಅಂದಾಜು ವೆಚ್ಚದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರೊಂದಿಗೆ ಇಂದು ಚರ್ಚಿಸಿದ್ದು, ಶೀಘ್ರದಲ್ಲಿ ಸರ್ಕಾರದಿಂದ ಅನುಮೋದನೆ ದೊರೆಕಲಿದ್ದು, ಮಂಗಳೂರು ಮನಪಾ ಕಾಮಗಾರಿ ಟೆಂಡರ್ ಪ್ರಕ್ರಿಯೆ ನಡೆಸುವಂತೆ ಸಚಿವರು ಸೂಚಿಸಿದರು.
ಮುಂದಿನ ಆಂತರಿಕ ವಿನ್ಯಾಸ, ಧ್ವನಿ ಬೆಳಕು, ಹಾಗೂ ಇತರ ಅಂತಿಮ ಕಾರ್ಯಗಳಿಗೆ ಬೇಕಾಗುವ ಹೆಚ್ಚುವರಿ ಅನುದಾನ ಬಿಡುಗಡೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಂಗಳೂರು ಮನಪಾ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಬಿಡುಗಡೆ ಮಾಡಲು ಅಗತ್ಯ ಕ್ರಮ ವಹಿಸುವಂತೆ ಉಸ್ತುವಾರಿ ಸಚಿವರು ತಿಳಿಸಿದರು.
ನಗರದ ಬೋಂದೆಲ್‍ನ ಜಾಗವು ರಂಗಮಂದಿರ ನಿರ್ಮಾಣಕ್ಕೆ ಸೂಕ್ತವಾಗಿರುವುದರಿಂದ ಇದಕ್ಕೆ ಸಂಪರ್ಕ ರಸ್ತೆ ಹಾಗೂ ಇತರ ಮೂಲ ಸೌಕರ್ಯಗಳನ್ನು ಯೋಜನೆಯಲ್ಲಿ ಸೇರಿಸಿಕೊಳ್ಳುವಂತೆ ಉಸ್ತುವಾರಿ ಸಚಿವರು ಸೂಚಿಸಿದರು.
Kshetra Samachara
05/02/2025 08:48 pm