", "articleSection": "Nature,Government", "image": { "@type": "ImageObject", "url": "https://prod.cdn.publicnext.com/s3fs-public/286525-1738769650-WhatsApp-Image-2025-02-05-at-9.03.35-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivaniBangalore" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ಕೊಡಗು, ಚಿಕ್ಕಮಗಳೂರು, ಹಾಸನ ಸುತ್ತಮುತ್ತ ಆನೆಗಳು ನಾಡಿನಲ್ಲೇ ಸಂಚರಿಸುತ್ತಿದ್ದು, ಸಾಮಾನ್ಯವಾಗಿ ಗುಂಪಿನ ನಾಯಕತ್ವ ವಹಿಸುವ ಹೆಣ್ಣಾ...Read more" } ", "keywords": "Elephant Radio Collar, Indigenous Technology, Wildlife Conservation, Elephant Protection, Radio Collar Launch, Karnataka Forest Department, Animal Tracking, Conservation Efforts, Bangalore News, Indian Wildlife, Elephant Habitat, Radio Telemetry, Wildlife Management, Conservation Innovation. ¹,Bangalore,Bangalore-Rural,Nature,Government", "url": "https://publicnext.com/node" }
ಬೆಂಗಳೂರು: ಕೊಡಗು, ಚಿಕ್ಕಮಗಳೂರು, ಹಾಸನ ಸುತ್ತಮುತ್ತ ಆನೆಗಳು ನಾಡಿನಲ್ಲೇ ಸಂಚರಿಸುತ್ತಿದ್ದು, ಸಾಮಾನ್ಯವಾಗಿ ಗುಂಪಿನ ನಾಯಕತ್ವ ವಹಿಸುವ ಹೆಣ್ಣಾನೆಗಳಿಗೆ ದೇಶೀ ನಿರ್ಮಿತ ರೇಡಿಯೋ ಕಾಲರ್ ಅಳವಡಿಸುವ ಮೂಲಕ ಆನೆ ಚಲನ ವಲನದ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಲಾಗುವುದು ಎಂದು ಇಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಅರಣ್ಯ ಭವನದಲ್ಲಿಂದು ಕರ್ನಾಟಕ ಅರಣ್ಯ ಇಲಾಖೆ ಬೆಂಗಳೂರಿನ ಇನ್‌ಫಿಕ್ಷನ್ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್ ಜೊತೆಗೂಡಿ ಅಭಿವೃದ್ಧಿಪಡಿಸಿರುವ ವೆಚ್ಚದಕ್ಷ ಕರ್ನಾಟಕ-ಪರಿಶೋಧಿತ ಪತ್ತೆ ಸಾಧನ (ಕೆ.ಪಿ. ಟ್ರ್ಯಾಕರ್) ಎಂಬ ಹೆಸರಿನ ರೇಡಿಯೋ ಕಾಲರ್ ಗಳನ್ನು ಬಂಡೀಪುರ ಮತ್ತು ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶದ ಅಧಿಕಾರಿಗಳಿಗೆ ಹಸ್ತಾಂತರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
6395 ಆನೆಗಳನ್ನು ಹೊಂದಿರುವ ಕರ್ನಾಟಕ ದೇಶದಲ್ಲಿ ಆನೆಗಳ ಸಂಖ್ಯೆಯಲ್ಲಿ ಅಗ್ರಸ್ಥಾನದಲ್ಲಿದೆ. ಆದರೆ ಆನೆಗಳ ಸಂಖ್ಯೆಗೆ ಅನುಗುಣವಾಗಿ ವನ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ. ಅಮೂಲ್ಯವಾದ ಜೀವ ಉಳಿಸಲು ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಸ್ಥಳೀಯರಿಗೆ ಮಾಹಿತಿ ನೀಡಲು ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂದರು.
ಈ ಕಾಲರ್ ಗೆ ಕರ್ನಾಟಕ ಪರಿಶೋಧಿತ ಟ್ರ್ಯಾಕರ್ ಅಥವಾ ಕರ್ನಾಟಕ ಪ್ರಡ್ಯೂಸ್ಡ್ (ಕೆ.ಪಿ. ಟ್ರ್ಯಾಕರ್) ಎಂದು ಹೆಸರಿಸಲಾಗಿದೆ.ಈ ಸಂದರ್ಭದಲ್ಲಿ ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಸುಭಾಷ್ ಮಾಲ್ಕಡೆ, ಎಪಿಸಿಸಿಎಫ್ ಕುಮಾರ್ ಪುಷ್ಕರ್ ಮತ್ತು ಅಜಿತ್ ರೆ ಉಪಸ್ಥಿತರಿದ್ದರು.
PublicNext
05/02/2025 09:05 pm