ಹೊಸಪೇಟೆ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವನ ಮೇಲೆ ದುಷ್ಕರ್ಮಿಗಳು ತಲೆ ಮತ್ತು ಮುಖದ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ. ಈ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರ ಹೋಬಳಿಯ ಚಪ್ಪದಹಳ್ಳಿ ಏರಿಯಾದ ಕಿರಿಟದ ಎಲ್ಲಮ್ಮ ದೇಗುಲದ ಬಳಿ ಇರೋ ಸಮುದಾಯ ಭವನದ ಮೇಲೆ ನಡೆದಿದೆ.
ನಾಗರಾಜ್ ಅಲಿಯಾಸ್ ಚಿನ್ನೋಡು(30) ಕೊಲೆಯಾದ ದುರ್ದೈವಿ ಅಂತ ತಿಳಿದು ಬಂದಿದೆ. ಕೊಲೆ ನಡೆದ ಸ್ಥಳಕ್ಕೆ ವಿಜಯನಗರ ಎಸ್ಪಿ ಡಾ. ಶ್ರೀಹರಿಬಾಬು ಬಿಎಲ್, ಎಎಸ್‌ಪಿ ಸಲೀಂಪಾಷಾ ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎನ್ನಲಾಗ್ತಿದ್ದು, ಕೊಲೆಗೆ ಕಾರಣ ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
05/02/2025 09:44 pm