ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದ್ರಿ ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಪ್ರವಾಸ ಬೆಳೆಸಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದ್ರಿ ಅವರು ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಹೊರರೋಗಿಗಳನ್ನ ವಿಚಾರಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ಕಾಂಪೌಂಡ್ ಒಳಭಾಗದಲ್ಲಿ ಕುಳಿತಂತಹ ರೋಗಿಗಳ ಬಳಿ ಹೋಗಿ ಅವರ ಯೋಗಕ್ಷೇಮವನ್ನು ವಿಚಾರಿಸಿದರು. ಬಳಿಕ ಅಧಿಕಾರಿಗಳನ್ನು ಅಲ್ಲಿಗೆ ಕರೆಸಿ ಹೆಚ್ಚಿನ ಚಿಕಿತ್ಸೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಸ್ಪತ್ರೆಗಳಿಗೆ ಬಡ ರೋಗಿಗಳು ಹೆಚ್ಚಾಗಿ ಬರುತ್ತಾರೆ, ಅವರಿಗೆ ಅವಶ್ಯಕ ಇರುವಂತಹ ಚಿಕಿತ್ಸೆಯನ್ನು ವೈದ್ಯಾಧಿಕಾರಿಗಳು ನೀಡುವುದು ನಿಮ್ಮ ಜವಾಬ್ದಾರಿ ಕರ್ತವ್ಯ ಎಂದು ಅಧಿಕಾರಿಗಳಿಗೆ ಸ್ಥಳದಲ್ಲಿ ಸೂಚಿಸಿದ್ದಾರೆ.

Edited By : Vinayak Patil
PublicNext

PublicNext

05/02/2025 10:23 pm

Cinque Terre

8.86 K

Cinque Terre

2

ಸಂಬಂಧಿತ ಸುದ್ದಿ