ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು : ಕರ್ನಾಟಕ ಪಬ್ಲಿಕ್ ಸ್ಕೂಲ್ ನೂತನ ಕಟ್ಟಡಕ್ಕೆ ಶಾಸಕರಿಂದ ಶಿಲಾನ್ಯಾಸ

ಕಾಪು : ವಿಧಾನಸಭಾ ಕ್ಷೇತ್ರದ ಹಿರಿಯಡಕ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡ ನಿರ್ಮಾಣಕ್ಕೆ 1 ಕೋಟಿ ರೂಪಾಯಿ ಅನುದಾನ ಸರಕಾರದಿಂದ ಮಂಜೂರಾಗಿದೆ. ಕಟ್ಟಡದ ಶಿಲಾನ್ಯಾಸವನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಾಲೇಜಿಗೆ ಕೊಡಮಾಡಿದ ಪೀಠೋಪಕರಣಗಳನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ, ಉಪಾಧ್ಯಕ್ಷರಾದ ಹರೀಶ್ ಸಾಲಿಯಾನ್, ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಬಿ.ಎಲ್. ವಿಶ್ವಾಸ ಭಟ್ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

06/02/2025 05:32 pm

Cinque Terre

674

Cinque Terre

0

ಸಂಬಂಧಿತ ಸುದ್ದಿ