ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಣಿಪಾಲ: 3ನೇ ಬಾರಿ ಆತ್ಮಹತ್ಯೆಗೆ ಯತ್ನ - ಕಾಲು ಮುರಿದುಕೊಂಡ ಅಸ್ಸಾಂನ ಯುವಕ

ಉಡುಪಿ: ಮಣಿಪಾಲದಲ್ಲಿ ಮಾನಸಿಕ ಅಸ್ವಸ್ಥ ಯುವಕನೊಬ್ಬ ಆತ್ಮಹತ್ಯೆಗೆ ಪ್ರಯತ್ನಿಸಿ ಕಾಲು ಮುರಿದುಕೊಂಡ ಘಟನೆ ಸಂಭವಿಸಿದೆ.

ಮಾಹಿತಿ ಪಡೆದ ಸಮಾಜ ಸೇವಕ ವಿಶು ಶೆಟ್ಟಿ ಅವರು ಸಾರ್ವಜನಿಕರ ಸಹಕಾರದಿಂದ ಆತನನ್ನು ರಕ್ಷಿಸಿ, ತನ್ನ ವಾಹದನಲ್ಲಿಯೇ ಕರೆದೊಯ್ದು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಯುವಕ ಮನೋ ರೋಗಿಯಾಗಿದ್ದು, ದೈಹಿಕವಾಗಿ ಹಾಗೂ ಮಾನಸಿಕವಾಗಿ ತೀವ್ರವಾಗಿ ಬಳಲಿರುವುದರಿಂದ ಯಾವುದೇ ವೈಯಕ್ತಿಕ ಮಾಹಿತಿಯನ್ನು ನೀಡುತ್ತಿಲ್ಲ. ಯುವಕ ಅಸ್ಸಾಂ ಮೂಲದವ ಎಂಬ ಮಾಹಿತಿ ಲಭಿಸಿದೆ.ಈತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಲು ಪ್ರಯತ್ನಿಸಿದ್ದ ಸಂದರ್ಭದಲ್ಲಿ ಸಾರ್ವಜನಿಕರು ರಕ್ಷಿಸಿದ್ದಾರೆ. ನಂತರ ನೇಣು ಬಿಗಿದು ಆತ್ಮಹತ್ಯೆ ನಡೆಸಲು ಪ್ರಯತ್ನಿಸಿರುವುದು ಕೂಡಾ ಬಯಲಾಗಿದೆ. ಇದೆಲ್ಲಾ ವಿಫಲವಾದ ಬಳಿಕ ಮರ ಏರಿ ಅಲ್ಲಿಂದ ಜಿಗಿದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಆತನ ಬಲಗಾಲಿನ ಎಲುಬು ಮುರಿತಕ್ಕೆ ಒಳಗಾಗಿದೆ. ಪ್ರಕರಣದ ಕುರಿತು ಮಣಿಪಾಲ ಠಾಣೆಗೆ ಮಾಹಿತಿ ನೀಡಲಾಗಿದೆ ಎಂದು ವಿಶು ಶೆಟ್ಟಿ ತಿಳಿಸಿದ್ದಾರೆ.

Edited By : Vijay Kumar
PublicNext

PublicNext

07/02/2025 12:35 pm

Cinque Terre

10.58 K

Cinque Terre

0