ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಪಡುಪಣಂಬೂರು ಬಳಿ ಕಾರಿಗೆ ಡಿಕ್ಕಿ ಹೊಡೆದ ಬಸ್ - ಚಾಲಕ, ಪ್ರಯಾಣಿಕರು ಪವಾಡ ಸದೃಶ ಪಾರು

ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಕಾರಿಗೆ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು ಕಾರು ಹಾಗೂ ಬಸ್ಸಿನಲ್ಲಿದ್ದ ಪ್ರಯಾಣಿಕರು ಪವಾಡ ಸದೃಶ ಪಾರಾಗಿದ್ದಾರೆ.

ಗಾಯಗೊಂಡವರನ್ನು ಕಾರು ಚಾಲಕ ಹಳೆಯಂಗಡಿ ಇಂದ್ರ ನಗರ ನಿವಾಸಿ ರಾಹಿಲ್ (26) ಎಂದು ಗುರುತಿಸಲಾಗಿದ್ದು ಕಾರಿನಲ್ಲಿದ್ದ ಪ್ರಯಾಣಿಕ ಸೋಹೈಲ್ ಹಾಗೂ ಬಸ್ ಪ್ರಯಾಣಿಕರು ಗಾಯಗಳಿಲ್ಲದೆ ಪಾರಾಗಿದ್ದಾರೆ.

ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಬಸ್ ಅದೇ ದಿಕ್ಕಿನಲ್ಲಿ ಬರುತ್ತಿದ್ದ ಕಾರು ನಡುವೆ ಅಪಘಾತ ಸಂಭವಿಸಿದ್ದು ಈ ಸಂದರ್ಭ ಕಾರು ಚಾಲಕ ಅಪಘಾತವನ್ನು ತಪ್ಪಿಸಲು ಯತ್ನಿಸಿದರೂ ಬಸ್ ಡಿಕ್ಕಿ ಹೊಡೆದು ಕಾರು ಚಾಲಕನ ನಿಯಂತ್ರಣ ತಪ್ಪಿ ತೀರಾ ಬಲಬದಿಗೆ ಚಲಿಸಿ ಹೆದ್ದಾರಿ ಡಿವೈಡರ್ ಮೇಲೇರಿದೆ.

ಅಪಘಾತದಿಂದ ಕಾರಿಗೆ ಸಂಪೂರ್ಣ ಹಾನಿಯಾಗಿದ್ದು ಬಸ್ ನ ಎದುರು ಭಾಗ ಜಖಂಗೊಂಡಿದೆ. ಅಪಘಾತದಿಂದ ಕೆಲ ಹೊತ್ತು ಹೆದ್ದಾರಿ ಸಂಚಾರ ವ್ಯತ್ಯಯ ಉಂಟಾಗಿದ್ದು ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು, ಹೆದ್ದಾರಿ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ, ಕಾರನ್ನು ಕ್ರೇನ್ ಮೂಲಕ ತೆರವುಗೊಳಿಸಲಾಯಿತು.

Edited By : Vinayak Patil
PublicNext

PublicNext

07/02/2025 03:59 pm

Cinque Terre

16.79 K

Cinque Terre

0