ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

video..ಆಧ್ಯಾತ್ಮಿಕದ ಆಳವು ನನ್ನನ್ನು ಮಂತ್ರಮುಗ್ಧರನ್ನಾಗಿಸಿತು : ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಡಿಕೆಶಿ ಪುತ್ರಿ

ಪ್ರಯಾಗ್​ರಾಜ್ ​: ಮಹಾ ಕುಂಭಮೇಳದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಪುತ್ರಿ ಐಶ್ವರ್ಯ ಪಾಲ್ಗೊಂಡು, ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ ಭಕ್ತಿ-ಭಾವ ಮೆರೆದಿದ್ದಾರೆ. ಈ ಕುರಿತಾದ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಮಾಸ್ಕ್ ಧರಿಸಿ ಮಹಾಕುಂಭಮೇಳದಲ್ಲಿ ಸುತ್ತಾಡಿರುವ ಐಶ್ವರ್ಯಾ ಬಳಿಕ ಗಂಗಾನದಿಯಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. ಇದಲ್ಲದೆ ಪ್ರಯಾಗ್​ರಾಜ್​ನ ಹಲವು ಸ್ಥಳಗಳಿಗೆ ಭೇಟಿ ನೀಡಿದ್ದು, ಇನ್​ಸ್ಟಾಗ್ರಾಮ್​​ನಲ್ಲಿ ಈ ಕುರಿತಾದ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ.

ಮಹಾಕುಂಭಕ್ಕೆ ಭೇಟಿ ನೀಡಿರುವ ಐಶ್ವರ್ಯಾ ಇದು ಪದಗಳನ್ನು ಮೀರಿದ ಅನುಭವ ಎಂದು ಹೇಳಿದ್ದಾರೆ. ಪ್ರಪಂಚದ ಅತಿ ದೊಡ್ಡ ಉತ್ಸವಗಳಲ್ಲಿ ಒಂದಾದ ಸಂಪೂರ್ಣ ಶಕ್ತಿ, ಏಕತೆ ಮತ್ತು ಆಧ್ಯಾತ್ಮಿಕದ ಆಳವು ನನ್ನನ್ನು ಮಂತ್ರಮುಗ್ಧರನ್ನಾಗಿಸಿತು.

ಭಕ್ತಿ, ಆಚರಣೆಗಳು ಮತ್ತು ಸಾಮೂಹಿಕ ಪ್ರಜ್ಞೆಯು ನಿಜವಾದ ದೈವಿಕತೆಯ ವಾತಾವರಣವನ್ನು ಸೃಷ್ಟಿಸಿತು ಎಂದು ತಮ್ಮ ಇನ್​ಸ್ಟಾಗ್ರಾಮ್​ ಪೋಸ್ಟ್​ನಲ್ಲಿ ಬರೆದುಕೊಂಡಿದ್ದಾರೆ.

ಜಗತ್ತಿನ ಅತಿ ದೊಡ್ಡ ಧಾರ್ಮಿಕ ಉತ್ಸವ 2025ರ ಮಹಾ ಕುಂಭಮೇಳಕ್ಕೆ ಜ.13 ರಂದು ಅದ್ದೂರಿ ಚಾಲನೆ ಸಿಕ್ಕಿದೆ. 144 ವರ್ಷಗಳ ಬಳಿಕ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದೆ. ಫೆ.26 ರ ವರೆಗೆ ಉತ್ಸವ ಜರುಗಲಿದೆ.

Edited By : Nirmala Aralikatti
PublicNext

PublicNext

07/02/2025 04:17 pm

Cinque Terre

76.64 K

Cinque Terre

6

ಸಂಬಂಧಿತ ಸುದ್ದಿ