", "articleSection": "Government", "image": { "@type": "ImageObject", "url": "https://prod.cdn.publicnext.com/s3fs-public/11357220250207043314filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Rahim Ujire Udupi" }, "editor": { "@type": "Person", "name": "8971147028" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಉಡುಪಿ: ಉಡುಪಿಯ ಹಿರಿಯ ಪತ್ರಕರ್ತರಾದ ರಾಜಾರಾಮ್ ತಲ್ಲೂರು ಅವರ ಸಲಹೆಯ ಮೇರೆಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇತ್ತೀಚಿಗೆ ರಾಜ್ಯ...Read more" } ", "keywords": "Node,Udupi,Government,Mangalore", "url": "https://publicnext.com/node" } ಉಡುಪಿ: ಪತ್ರಕರ್ತ ರಾಜಾರಾಂ ತಲ್ಲೂರು ಮನವಿಗೆ ಸ್ಪಂದಿಸಿದ ಸಿಎಂ- ಹಠಾತ್ ಸಾವು ಅಧ್ಯಯನಕ್ಕೆ ತಜ್ಞರ ಸಮಿತಿ ರಚಿಸಲು ಸೂಚನೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಪತ್ರಕರ್ತ ರಾಜಾರಾಂ ತಲ್ಲೂರು ಮನವಿಗೆ ಸ್ಪಂದಿಸಿದ ಸಿಎಂ- ಹಠಾತ್ ಸಾವು ಅಧ್ಯಯನಕ್ಕೆ ತಜ್ಞರ ಸಮಿತಿ ರಚಿಸಲು ಸೂಚನೆ

ಉಡುಪಿ: ಉಡುಪಿಯ ಹಿರಿಯ ಪತ್ರಕರ್ತರಾದ ರಾಜಾರಾಮ್ ತಲ್ಲೂರು ಅವರ ಸಲಹೆಯ ಮೇರೆಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇತ್ತೀಚಿಗೆ ರಾಜ್ಯದಲ್ಲಿ ಹೃದಯಾಘಾತ , ಹೃದಯ ಸ್ಥಂಭನ, ಮೆದುಳು ಸಂಬಂಧಿ ಮತ್ತು ನರ ಸಂಬಂಧಿ ಕಾರಣಗಳಿಂದ ಯುವ ಜನರು ಹಠಾತ್ ಸಾವಿಗೀಡಾಗುತ್ತಿರುವ ಬಗ್ಗೆ ಕ್ರಮ ಕೈಗೊಳ್ಳಲು ಬೇಕಾದ ತಜ್ಞರ ಹಾಗೂ ವಿಜ್ಞಾನಿಗಳ ಸಮಿತಿಯನ್ನು ರಚಿಸಲು ಮತ್ತು ಕಟ್ಟುನಿಟಿನ ಕ್ರಮವನ್ನು ತೆಗೆದುಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಪ್ರತಿದಿನ ಇಂತಹ ಘಟನೆಗಳು ನಡೆಯುತ್ತಿದ್ದು ಪ್ರತಿ ಸಾವು ಅವಲಂಬಿತ ಕುಟುಂಬವನ್ನು ಆರ್ಥಿಕ ಮತ್ತು ಸಾಮಾಜಿಕ ಸಮಸ್ಯೆಗಳಿಗೆ ತಳ್ಳುತ್ತಿದೆ . ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡ ಪರಿಣಾಮಗಳ ಕಾರಣಕ್ಕೆ ಈ ಸಾವುಗಳು ಸಂಭವಿಸುತ್ತಿರಬಹುದು ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಆದರಿಂದ ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಿ ಇಂತಹ ಸಾವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಈ ಸಮಿತಿ ರಚಿಸಲಾಗಿದೆ. ಸೂಕ್ತ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳ ಸಮಿತಿಯನ್ನು ರಚಿಸಿ ವರದಿ ಪಡೆದು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

07/02/2025 04:33 pm

Cinque Terre

4.91 K

Cinque Terre

0