ಮುಲ್ಕಿ: ಆದಿಕಿಲ್ಲಾಡಿ ಶ್ರೀ ಧೂಮಾವತಿ ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ಶ್ರೀ ಉಳ್ಳಾಯ ದೈವದ ನೇಮೋತ್ಸವ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಬೆಳಿಗ್ಗೆ 7:30 ರಿಂದ ಶುದ್ಧ ಹೋಮ, 9:30ಕ್ಕೆ ಚಪ್ಪರ ಮುಹೂರ್ತ, 11 ಗಂಟೆಗೆ ಭಂಡಾರ ಇಳಿಯುವುದು, ಮಧ್ಯಾಹ್ನ ಮಹಾ ಅನ್ನ ಸಂತರ್ಪಣೆ ನಡೆಯಿತು.
ಸಂಜೆ ಶ್ರೀ ಉಳ್ಳಾಯ ದೈವದ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು.
ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ರಂಗನಾಥ ಶೆಟ್ಟಿ, ಸಮಿತಿಯ ಕಾರ್ಯಾಧ್ಯಕ್ಷ ಮಾಧವ ಪೂಜಾರಿ, ಕಾರ್ಯದರ್ಶಿ ಸತೀಶ್ ಕಿಲ್ಪಾಡಿ, ಕೋಶಾಧಿಕಾರಿ ಮೋಹನ್ ಶೆಟ್ಟಿ, ಮುಂಬೈ ಸಮಿತಿ ಅಧ್ಯಕ್ಷ ಪ್ರಭಾ ಕೆ.ಬಂಗೇರ, ಯುವಕ ಮಂಡಲ ಹಾಗೂ ಮಹಿಳಾ ಮಂಡಳದ ಅಧ್ಯಕ್ಷರು, ಇತರ ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
PublicNext
07/02/2025 10:21 pm