ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ದೆಹಲಿ ಚುನಾವಣೆ ಫಲಿತಾಂಶ ನಾಳೆ ಶನಿವಾರ ಫೆಬ್ರವರಿ 8ರಂದು ಪ್ರಕಟವಾಗಲಿದೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಹಾಗೂ ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಬಿಜೆಪಿ ವಿರುದ್ಧ ಗುರುತರ ಆರೋಪ ಮಾಡಿದ್ದಾರೆ. ಫಲಿತಾಂಶಕ್ಕೂ ಮೊದಲೇ ಬಿಜೆಪಿ ನಾಯಕರು ಎಎಪಿಯ 16 ಅಭ್ಯರ್ಥಿಗಳಿಗೆ ಕರೆ ಮಾಡಿ ತಮ್ಮ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ. ಬಿಜೆಪಿ ಬಿಟ್ಟು ಎಎಪಿ ಸೇರಿದರೆ 15 ಕೋಟಿ ಹಣದ ಜೊತೆಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ. ಆದ್ರೆ ನಮ್ಮವರು ಯಾವ ಕಾರಣಕ್ಕೂ ಬಿಟ್ಟು ಹೋಗೋದಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಕೇಜ್ರಿವಾಲ್ ಹೇಳಿಕೆ ಹೊಸ ಸಂಘರ್ಷಕ್ಕೆ ಕಾರಣವಾಗಿದೆ. ಈ ರೀತಿ ನಿರಾಧಾರ ಆರೋಪಗಳನ್ನು ಮಾಡಿದ್ರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ದೆಹಲಿಯ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವೀರೇಂದ್ರ ಸಚ್‌ದೇವ್ ಎಚ್ಚರಿಸಿದ್ದಾರೆ.
PublicNext
07/02/2025 10:54 pm