", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/222042-1739114131-Add-a-heading---2025-02-09T204519.765.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಇಂಪಾಲ್: ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಭಾನುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ....Read more" } ", "keywords": "Manipur Chief Minister, Biren Singh, sudden resignation, Indian politics, Manipur news, BJP leader, state government, political developments. ,,Politics", "url": "https://publicnext.com/node" } ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ದಿಢೀರ್ ರಾಜೀನಾಮೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ದಿಢೀರ್ ರಾಜೀನಾಮೆ

ಇಂಪಾಲ್: ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಭಾನುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇಂಪಾಲ್‌ನಲ್ಲಿ ಮಣಿಪುರ ರಾಜ್ಯಪಾಲ ಅಜಯ್ ಕುಮಾರ್ ಬಲ್ಲಾ ಅವರನ್ನು ಭೇಟಿಯಾದ ಬಿರೆನ್ ಸಿಂಗ್ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರದಲ್ಲಿ ಮಣಿಪುರ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿರುವುದಕ್ಕೆ ಧನ್ಯವಾದ ಹೇಳಿದ್ದಾರೆ. ಇದೇ ವೇಳೆ ಕೆಲ ಪ್ರಮುಖ ವಿಷಯಗಳನ್ನು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮಣಿಪುರದ ಬಿಜೆಪಿ ಸರ್ಕಾರದ ಬಗ್ಗೆ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಪ್ರತಿಪಕ್ಷಗಳು ಚರ್ಚೆಯಲ್ಲಿ ತೊಡಗಿರುವಂತೆಯೇ ಎನ್. ಬಿರೇನ್ ಸಿಂಗ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಶಾನ್ಯ ರಾಜ್ಯ ಮೇ 2023 ರಿಂದ ಜನಾಂಗೀಯ ಹಿಂಸಾಚಾರದಿಂದ ನರಳುತ್ತಿದೆ. ನವದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಬಿರೇನ್ ಸಿಂಗ್ ಭೇಟಿಯಾದ ಸ್ವಲ್ಪ ಸಮಯದ ನಂತರ ಇಂಫಾಲ್‌ನಲ್ಲಿ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಇದಕ್ಕೂ ಮೊದಲು ಸಿಂಗ್ ಅವರು ಬಿಜೆಪಿ ನೇತೃತ್ವದ ಆಡಳಿತಾರೂಢ ಮೈತ್ರಿಕೂಟದ ಶಾಸಕರೊಂದಿಗೆ ಸಿಎಂ ಸೆಕ್ರೆಟರಿಯೇಟ್‌ನಲ್ಲಿ ಸಭೆ ನಡೆಸಿದರು.

Edited By : Vijay Kumar
PublicNext

PublicNext

09/02/2025 08:45 pm

Cinque Terre

39.29 K

Cinque Terre

0

ಸಂಬಂಧಿತ ಸುದ್ದಿ