ಬೆಂಗಳೂರು : ಮೆಟ್ರೋ ಬೆಲೆ ಏರಿಕೆಗೆ ಬಿಜೆಪಿ ನಾಯಕರೇ ವಿರೋಧ ವ್ಯಕ್ತ ಪಡಿಸಿದ್ದಾರೆ. ಮೆಟ್ರೋ ಟಿಕೆಟ್ ಬೆಲೆ ಏರಿಕೆ ಹಿಂಪಡೆಯುವಂತೆ ಕರ್ನಾಟಕ ಬಿಜೆಪಿ ನಿಯೋಗ BMRCL ಎಂಡಿ ಮಹೇಶ್ವರ್ ರಾವ್ ಬಳಿ ಆಗ್ರಹಿಸಿದ್ದಾರೆ.
ಶಾಸಕ ಸಿ.ಕೆ ರಾಮಮೂರ್ತಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜೀವ್ ನೇತೃತ್ವದಲ್ಲಿ ಭೇಟಿ ಮಾಡಿದ್ದು, ಸುಮಾರು 46 ಪರ್ಸೆಂಟ್ ಟಿಕೆಟ್ ದರ ಏರಿಕೆ ಆಗಿದೆ. ಸಾರ್ವಜನಿಕ ವಲಯದಲ್ಲೂ ಬೆಲೆ ಏರಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಮೆಟ್ರೋ ವಿರುದ್ಧ ಜನಸಾಮಾನ್ಯರು ಸಹ ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ.
Kshetra Samachara
10/02/2025 04:24 pm