", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/235762-1739191303-Untitled-design---2025-02-10T181137.119.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "nagaraj.talugeri" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಪದೇ ಪದೇ ಬಹಿರಂಗವಾಗಿ ಮಾತನಾ...Read more" } ", "keywords": "BJP disciplinary committee, Yatnal showcause notice, Karnataka BJP news, BJP disciplinary action, Yatnal controversy, Karnataka politics, BJP state unit, disciplinary committee notice. ,,Politics", "url": "https://publicnext.com/node" }
ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಪದೇ ಪದೇ ಬಹಿರಂಗವಾಗಿ ಮಾತನಾಡುತ್ತಿದ್ದ ಯತ್ನಾಳ್‌ಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ನೀಡಲಾಗಿದೆ.
ಕೇಂದ್ರ ಶಿಸ್ತು ಸಮಿತಿಯ ಓಂ ಪಾಠಕ್‌ರಿಂದ ಯತ್ನಾಳ್‌ಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ನೋಟಿಸ್‌ನಲ್ಲಿ 72 ಗಂಟೆಗಳಲ್ಲಿ ಉತ್ತರಿಸಲು ಸೂಚನೆ ನೀಡಲಾಗಿದೆ. ಕಳೆದ ಬಾರಿ ನೋಟೀಸ್ ನೀಡಲಾಗಿತ್ತು. ತಮ್ಮಿಂದ ಉತ್ತರವೂ ಸಹ ಬಂದಿದೆ. ಆದ್ರೆ ನಿಮ್ಮ ನಡವಳಿಕೆಯಲ್ಲಿ ಬದಲಾವಣೆ ಮಾಡಿಕೊಂಡಿಲ್ಲ. ಹೀಗಾಗಿ ತಾವು 72 ಗಂಟೆ ಈ ನೋಟಿಸ್‌ಗೆ ಉತ್ತರಿಸಬೇಕು ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.
ವಿಜಯೇಂದ್ರ ವಿರುದ್ಧ ದೂರು ನೀಡ್ತೀವಿ ಎಂದು ದೆಹಲಿಗೆ ತೆರಳಿದ್ದ ರೆಬಲ್ಸ್ ಟೀಂಗೆ ಯತ್ನಾಳ್‌ಗೆ ನೋಟಿಸ್ ನೀಡಿರೋದು ದೊಡ್ಡ ಶಾಕ್ ಆಗಿದೆ. ಯತ್ನಾಳ್ ದೆಹಲಿಯಲ್ಲಿ ಇರುವಾಗಲೇ ಈ ನೋಟಿಸ್ ಜಾರಿ ಮಾಡಲಾಗಿದೆ. ಇನ್ನೂ ಈ ನೋಟಿಸ್‌ಗೆ ಯತ್ನಾಳ್ ಮತ್ತು ಅವರ ಟೀಮ್ ಈಗ ಏನು ಉತ್ತರ ನೀಡಲಿದ್ದಾರೆ ಅನ್ನೋದನ್ನ ಕಾದು ನೋಡಬೇಕಿದೆ.
PublicNext
10/02/2025 06:11 pm