", "articleSection": "Politics,Government", "image": { "@type": "ImageObject", "url": "https://prod.cdn.publicnext.com/s3fs-public/387839-1739192873-Untitled-design---2025-02-10T183745.224.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ಮೈಕ್ರೋ ಫೈನಾನ್ಸ್ ಕುರಿತ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ಕೇಳಿದ ಸಮಗ್ರ ವಿವರಣೆಗಳೊಂದಿಗೆ ವಾಪಾಸ್ ರಾಜ್ಯಪಾಲರಿಗೆ ರವಾನಿಸಲಾಗಿದ...Read more" } ", "keywords": "Bangalore, Micro Finance Bill, Sugreeva Committee Report, Karnataka Government, Governor Returns Bill, Explanation, Micro Finance Institutions, Self Help Groups. ,,Politics,Government", "url": "https://publicnext.com/node" }
ಬೆಂಗಳೂರು: ಮೈಕ್ರೋ ಫೈನಾನ್ಸ್ ಕುರಿತ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ಕೇಳಿದ ಸಮಗ್ರ ವಿವರಣೆಗಳೊಂದಿಗೆ ವಾಪಾಸ್ ರಾಜ್ಯಪಾಲರಿಗೆ ರವಾನಿಸಲಾಗಿದೆ.
ಮೈಕ್ರೋ ಫೈನಾನ್ಸ್ ಹಾವಳಿ ತಡೆಗಾಗಿ ರಾಜ್ಯ ಸರ್ಕಾರ ಸಿದ್ದಪಡಿಸಿದ್ದ ಸುಗ್ರೀವಾಜ್ಞೆಯನ್ನ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಕೆಲವು ಸ್ಪಷ್ಟನೆ ಕೇಳಿ ವಾಪಸ್ ಕಳಿಸಿದ್ದರು, ಸುಗ್ರೀವಾಜ್ಞೆಯಲ್ಲಿ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಹರಿಸಿದೆ, ಆದ್ರೆ ಸಹಜ ನ್ಯಾಯದ ಅಡಿಯಲ್ಲಿ ಸಾಲ ಕೊಟ್ಟವರಿಗೆ ರಕ್ಷಣೆ ಕಾಣಿಸ್ತಿಲ್ಲ, ಇದು ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ.
ಅಲ್ದೇ ಮೈಕ್ರೋ ಫೈನಾನ್ಸ್ 3 ಲಕ್ಷಕ್ಕಿಂತ ಜಾಸ್ತಿ ಸಾಲ ಕೊಡುವುದಿಲ್ಲ, ''ನೀವು ಐದು ಲಕ್ಷ ದಂಡ ಹೇಗೆ ಹಾಕುತ್ತೀರಾ ಎಂದು ಪ್ರಶ್ನಿಸಿದ್ದರು, ಇನ್ನೂ ಸಾಲ ಪಡೆಯುವವನ ಬಳಿ ಏನೂ ದಾಖಲೆ ತಗೆದುಕೊಳ್ಳಬಾರದು ಎಂದು ಹೇಳಿದ್ದೀರಾ..? ಆದರೆ ಇದು ಸರ್ಕಾರಿ ಸಂಸ್ಥೆಗಳ ಸಾಲದ ವೇಳೆ ಅನುಸರಿಸಬೇಕಾದ ಪರಿಸ್ಥಿತಿ ಎದುರಾಗಬಹುದು.
ಶಿಕ್ಷೆ ಪ್ರಮಾಣ ಹತ್ತು ವರ್ಷ ವಿಧಿಸಲಾಗಿದೆ. ಆದ್ರೆ ಶಿಕ್ಷೆ ಪ್ರಮಾಣದಲ್ಲಿ ಯಾವುದೇ ಲಾಜಿಕ್ ಇಲ್ಲ, ಪ್ರಾಮಾಣಿಕವಾಗಿ ಸಾಲ ಕೊಟ್ಟವರಿಗೂ ಇದು ಎಫೆಕ್ಟ್ ಆಗಲಿದೆ. ಪ್ರಾಮಾಣಿಕವಾಗಿ ಸಾಲ ಮರುಪಾವತಿ ಮಾಡುವವರಿಗೂ ಸಮಸ್ಯೆ ಆಗಲಿದೆ ಎಂದೆಲ್ಲ ಪ್ರಶ್ನೆಗೆಗಳಿಗೆ ವಿವರಣೆ ಕೇಳಿ ವಾಪಸ್ ಕಳುಹಸಿದ್ದರು.
ರಾಜ್ಯಪಾಲರು ವಾಪಾಸ್ ಕಳುಹಿಸಿದ ಬಳಿಕ ಮತ್ತೆ ಸಭೆ ನಡೆಸಿದ ಕಾನೂನು ಇಲಾಖೆ ರಾಜ್ಯಪಾಲರು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ವಿವರಣೆ ಸಿದ್ದಪಡಿಸಿ ಇಂದು ಸಿಎಂ ಸಿದ್ದರಾಮಯ್ಯ ಅನುಮತಿ ಪಡೆದುಕೊಂಡು ಇದೀಗ ರಾಜ್ಯಪಾಲರು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ವಿವರಣೆಗಳೊಂದಿಗೆ ಸುಗ್ರೀವಾಜ್ಞೆಯನ್ನ ರಾಜ್ಯಪಾಲರಿಗೆ ಕಾನೂನು ಇಲಾಖೆ ಕಳುಹಿಸಿ ಕೊಟ್ಟಿದ್ದಾರೆ.
PublicNext
10/02/2025 06:38 pm