", "articleSection": "Infrastructure,Government", "image": { "@type": "ImageObject", "url": "https://prod.cdn.publicnext.com/s3fs-public/462628-1739202784-WhatsApp-Image-2025-02-10-at-9.22.45-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivaniBangalore" }, "editor": { "@type": "Person", "name": "Manjunath.TV9" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಕೆ ಖಂಡಿಸಿ ಮಹಾಲಕ್ಷ್ಮಿ ಲೇಔಟ್ ಮೆಟ್ರೋ ಸ್ಟೇಷನ್ ಮುಂಭಾಗ ಬಿಜೆಪಿ ನೂರಾರು ಕಾರ್ಯಕರ್ತರೊಂದಿಗೆ ಪ್ರತಿಭಟನೆ ...Read more" } ", "keywords": "Bengaluru metro fare hike, metro fare increase, Bengaluru news, Karnataka news, Indian news, public transportation, accessibility, affordability, commuters, metro fare hike protest, MLA Gopalayya, government intervention, fare hike rollback, BMRCL, Bengaluru Metro Rail Corporation Limited, metro fare structure, fare revision, commuter rights, public interest, social justice, equality, fairness, transparency,,Bangalore,Bangalore-Rural,Infrastructure,Government", "url": "https://publicnext.com/node" }
ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಕೆ ಖಂಡಿಸಿ ಮಹಾಲಕ್ಷ್ಮಿ ಲೇಔಟ್ ಮೆಟ್ರೋ ಸ್ಟೇಷನ್ ಮುಂಭಾಗ ಬಿಜೆಪಿ ನೂರಾರು ಕಾರ್ಯಕರ್ತರೊಂದಿಗೆ ಪ್ರತಿಭಟನೆ ನಡೆಸಿ, ಕೂಡಲೇ ಹಿಂಪಡೆಯಬೇಕೆಂದು ಮಾಜಿ ಸಚಿವರು ಹಾಗೂ ಶಾಸಕರಾದ ಕೆ ಗೋಪಾಲಯ್ಯನವರು ಅವರು ಆಗ್ರಹಿಸಿದ್ದಾರೆ.
ಮೆಟ್ರೋ ಸಂಪಾದನೆ ಮಾಡುವ ಇಲಾಖೆ ಅಲ್ಲ, ಸೇವಾ ವಲಯ ಇದು, ನಗರದ ದಟ್ಟಣೆ ಕಡಿಮೆ ಮಾಡುವ ಸಲುವಾಗಿ ಮೆಟ್ರೋ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗಿದೆ. ಏಕಾಏಕಿ ದರ ಏರಿಕೆಯನ್ನು ನಾವು ವಿರೋಧಿಸುತ್ತೇವೆ ಎಂದು ತಿಳಿಸಿದರು.
ಈಗಾಗಲೇ ರಾಜ್ಯ ಸರ್ಕಾರ ಜನರ ನೀರು, ಹಾಲು ವಿದ್ಯುತ್ ಮೇಲೆ ದರ ಏರಿಕೆಯ ಬರೆ ಎಳೆದಿದೆ. ಈಗ ಮೆಟ್ರೋ ದರ 46% ಏರಿಕೆ ಮಾಡಿ ಜನಸಾಮಾನ್ಯರ ಮೇಲೆ ಬರೆ ಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೆಟ್ರೋ ನಿಲ್ದಾಣಗಳಲ್ಲಿ ಜನರಿಗೆ ಅಗತ್ಯ ಅನುಕೂಲಗಳನ್ನೂ ಮೆಟ್ರೋ ಮಾಡಲಿ ಎಂದು ಒತ್ತಾಯಿಸಿದರು. ಕೇಂದ್ರ ಸರ್ಕಾರ ಅನುದಾನ ನೀಡಿದೆ ಪ್ರಯಾಣದರ ಹೆಚ್ಚಳ ಸರಿಯಲ್ಲ ಎಂದು ಆಕ್ಷೇಪಿಸಿದರು.
PublicNext
10/02/2025 09:25 pm