ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

VIDEO: ಪ್ಯಾರಿಸ್‌ನಲ್ಲಿ ಮೋದಿಗೆ ಅದ್ಧೂರಿ ಸ್ವಾಗತ - ಕೈ ಕುಲುಕಿದ ಭಾರತೀಯರು

ಪ್ಯಾರಿಸ್: ಮೂರು ದಿನಗಳ ಪ್ರವಾಸಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ಯಾರಿಸ್‌ಗೆ ಸೋಮವಾರ ತೆರಳಿದ್ದಾರೆ. ಪ್ಯಾರಿಸ್‌ ವಿಮಾನ ನಿಲ್ದಾಣದಲ್ಲಿ ಭಾರತದ ಪ್ರಧಾನ ಮಂತ್ರಿ ಮೋದಿಗೆ ಭವ್ಯ ಸ್ವಾಗತ ದೊರೆತಿದೆ. ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಮೋದಿ ಅವರನ್ನು ಬರಮಾಡಿಕೊಂಡಿದ್ದಾರೆ.

ಪ್ಯಾರಿಸ್‌ನಲ್ಲಿ ನಡೆಯಲಿರುವ 'AI ಆಕ್ಷನ್ ಶೃಂಗಸಭೆ'ಯಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

Edited By : Nagaraj Tulugeri
PublicNext

PublicNext

11/02/2025 04:15 pm

Cinque Terre

20.57 K

Cinque Terre

3