ಗುವಾಹಟಿ: ಯೂಟ್ಯೂಬರ್‌ಗಳಾದ ರಣವೀರ್ ಅಲಹಾಬಾದಿಯಾ, ಸಮಯ್ ರೈನಾ ಹಾಗೂ ಸಂಗಡಿಗರು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಪೋಷಕರು ಮತ್ತು ಲೈಂಗಿಕತೆಯ ಕುರಿತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿ ವಿವಾದಕ್ಕೆ ಸಿಲುಕಿರುವ ಇನ್‌ಫ್ಲುಯೆನ್ಸರ್, ಯೂಟ್ಯೂಬರ್ ರಣವೀರ್ ಇಲಾಹಾಬಾದಿಯಾ ವಿರುದ್ಧ ಗುವಾಹಟಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಇಂಡಿಯಾಸ್ ಗಾಟ್ ಲ್ಯಾಟೆಂಟ್ ಕಾರ್ಯಕ್ರಮದಲ್ಲಿ ರಣವೀರ್ ಅಲಹಾಬಾದಿಯಾ ತಂದೆ-ತಾಯಿ ಸೆಕ್ಸ್ ಬಗ್ಗೆ ಮಾತನಾಡಿದ್ದು, ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಇದರ ಬೆನ್ನಲ್ಲೇ ಇಲಾಹಾಬಾದಿಯಾ ವಿರುದ್ಧ ಭಾರಿ ಆಕ್ರೋಶ ಭುಗಿಲೆದ್ದಿತ್ತು. ಬಳಿಕ ತಮ್ಮ ಹೇಳಿಕೆಗಾಗಿ ಕ್ಷಮೆಯಾಚಿಸಿದ್ದರು.
ಇದಕ್ಕೆ ಸಂಬಂಧಿಸಿದಂತೆ ನಗರದ ನಿವಾಸಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ರಣವೀರ್ ಇಲಾಹಾಬಾದಿಯಾ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
31 ವರ್ಷದ ಪಾಡ್‌ಕಾಸ್ಟರ್ ರಣವೀರ್ ಅಲ್ಲದೆ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಸಮಯ್ ರೈನಾ, ಆಶಿಶ್ ಚಂಚಲಾನಿ, ಜಸ್‌ಪ್ರೀತ್ ಸಿಂಗ್ ಮತ್ತು ಅಪೂರ್ವ ಮಖಿಜಾ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ಪ್ರಕರಣದ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
PublicNext
11/02/2025 08:16 pm