", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/52563-1739364985-3a5432d2-3d87-4b48-803c-a9cbd7cd817b.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಮೈಕ್ರೋ ಫೈನಾನ್ಸ್ ಹಾವಳಿ ತಡಗೆ ಸುಗ್ರೀವಾಜ್ಞೆ ಮೂಲಕ ಬಿಗಿಗೊಳಿಸಲು ಸಿದ್ದಪಡಿಸಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚೆಂದ್ ಗೆ...Read more" } ", "keywords": "Governor signs Micro Finance Ordinance with 3 provisions,,Politics", "url": "https://publicnext.com/node" } 3 ನಿಬಂಧನೆಯೊಂದಿಗೆ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಅಂಕಿತ ಹಾಕಿದ ರಾಜ್ಯಪಾಲರು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

3 ನಿಬಂಧನೆಯೊಂದಿಗೆ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಅಂಕಿತ ಹಾಕಿದ ರಾಜ್ಯಪಾಲರು

ಬೆಂಗಳೂರು : ಮೈಕ್ರೋ ಫೈನಾನ್ಸ್ ಹಾವಳಿ ತಡಗೆ ಸುಗ್ರೀವಾಜ್ಞೆ ಮೂಲಕ ಬಿಗಿಗೊಳಿಸಲು ಸಿದ್ದಪಡಿಸಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಇಂದು ಅಂಕಿತ ಹಾಕಿದ್ದಾರೆ. ಆದ್ರೆ ಮೂರು ನಿಬಂಧನೆಗಳೊಂದಿಗೆ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ.

1) RBI ಅಡಿ ನೋಂದಾಯಿತ,ಸಹಕಾರಿ,ಸಣ್ಣ ಹಣಕಾಸು ಸಂಸ್ಥೆಗಳಿಗೆ ವ್ಯಾಪಾರ ವ್ಯವಹಾರಕ್ಕೆ ಯಾವುದೇ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸಬೇಕು.

2) ಈಗಾಗಲೇ ಸಾಲ ನೀಡಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿದಾತರು ಈ ಸುಗ್ರೀವಾಜ್ಞೆಯಿಂದ ಅವರ ಸಾಲ,ಹಾಗೂ ಬಡ್ಡಿ ವಸೂಲಾತಿಗೆ ಅಡ್ಡಿಯಾಗಬಹುದು ಮತ್ತು ಕಾನೂನು ಹೋರಾಟಕ್ಕೆ ಆಸ್ಪದ ಕಲ್ಪಿಸಬಹುದು.

3)ಸಂವಿಧಾನದ ಕಲಂ 19 ಮತ್ತು 32 ಅಡಿ ನೈಸರ್ಗಿಕ ನ್ಯಾಯ ಪಡೆಯಲು (Natural Justice) ಅವಕಾಶವಿದೆ.

ಹೀಗಾಗಿ ಅವರ ಹಕ್ಕು ಮತ್ತು ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟಾಗದಂತೆ‌ ಎಚ್ಚರಿಕೆ ವಹಿಸಿ ಈ ಮೂರು ನಿಬಂಧನೆಗಳಿಗೆ ಒಳಪಟ್ಟು ಸುಗ್ರೀವಾಜ್ಞೆಗೆ ರಾಜ್ಯಪಾಲರು ಅನುಮೋದಿಸಿದ್ದಾರೆ ಅಲ್ದೇ ವಿಧಾನ ಮಂಡಲದ ಅಧಿವೇಶನದಲ್ಲಿ ವಿಧೇಯಕ ಮಂಡಿಸಿ ಸಮಗ್ರವಾಗಿ ಚೆರ್ಚಿಸಿ ವಿಧೇಯಕ ತರುವಂತೆಯೂ ರಾಜ್ಯಪಾಲರು ಸೂಚಿಸಿದ್ದಾರೆ.

Edited By : Nirmala Aralikatti
PublicNext

PublicNext

12/02/2025 06:26 pm

Cinque Terre

23.63 K

Cinque Terre

1

ಸಂಬಂಧಿತ ಸುದ್ದಿ