", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/286525-1739365559-WhatsApp-Image-2025-02-12-at-6.35.51-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ದೆಹಲಿ : ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗಲಿದ್ಯಾ? ಕೂತಹಲ ಮೂಡಿಸುತ್ತಿದೆ ದಲಿತ ಸಚಿವರಿಂದ ಕಾಂಗ್ರೆಸ್ ಹೈಕಮಾಂಡ್ ನಾಯಕರ ಭೇಟಿ? ಹ...Read more" } ", "keywords": " Karnataka Pradesh Congress Committee, KPCC President, Congress Party Karnataka, Karnataka Politics, Indian National Congress, State Congress Committee, Karnataka News, Political Leadership, Congress Party India,,Politics", "url": "https://publicnext.com/node" }
ದೆಹಲಿ : ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗಲಿದ್ಯಾ? ಕೂತಹಲ ಮೂಡಿಸುತ್ತಿದೆ ದಲಿತ ಸಚಿವರಿಂದ ಕಾಂಗ್ರೆಸ್ ಹೈಕಮಾಂಡ್ ನಾಯಕರ ಭೇಟಿ? ಹಾಗಿದ್ರೆ ರಾಜ್ಯ ಕಾಂಗ್ರೆಸ್ ಮನೆಯಲ್ಲಿ ಏನ್ ನಡೆಯುತ್ತಿದೆ ಇದ್ರ ಬಗ್ಗೆ ಒಂದು ಡಿಟೈಲ್ಸ್ ರಿಪೋರ್ಟ್ ಇಲ್ಲಿದೆ
ದೇಶಾದ್ಯಂತ ಪ್ರದೇಶ ಕಾಂಗ್ರೆಸ್ ಸಮಿತಿ ಹಂತ ಹಂತವಾಗಿ ಅಧ್ಯಕ್ಷರ ನೇಮಕ ಮಾಡಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಈ ಹೇಳಿಕೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಚರ್ಚೆಗಳು ಶುರುವಾಗಿವೆ. ಪ್ರಸ್ತುತ ಡಿಸಿಎಂ ಡಿಕೆಶಿ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ ಅವರು ಸಹ ಬದಲಾಗುತ್ತಾರಾ ಎಂದು ಅವರದ್ದೇ ಪಕ್ಷದ ಮುಖಂಡರು ಕಾರ್ಯಕರ್ತರು ಚರ್ಚೆ ಮಾಡ್ತಿದ್ದಾರೆ.
ಇನ್ನೂ ಹಂತ ಹಂತವಾಗಿ ಪಿಸಿಸಿ ಅಧ್ಯಕ್ಷರ ನೇಮಕ ಕುರಿತು ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಬೆನ್ನಲ್ಲೇ ಸಚಿವ ಕೆ ಎನ್ ರಾಜಣ್ಣ ಇಂದು ನವದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ರನ್ನ ಭೇಟಿಯಾಗಿ ಸಮಾಲೋಚನೆ ನಡೆಸಿರೋದು ಸಾಕಷ್ಟು ಕೂತಹಲ ಮೂಡಿಸಿದೆ. ಇಲಾಖೆಯ ಕಾರ್ಯ ನಿಮಿತ್ತ ದೆಹಲಿಗೆ ತೆರಳಿದ್ದ ಕೆ ಎನ್ ರಾಜಣ್ಣ ಇಲಾಖೆ ಕಾರ್ಯದ ಜೊತೆಗೆ ಕಾಂಗ್ರೆಸ್ ವರಿಷ್ಠರನ್ನೂ ಸಹ ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.
ಆದ್ರಲ್ಲೂ ರಾಜ್ಯದ ದಲಿತ ಸಚಿವರು ಒಬ್ಬೊಬ್ಬರಾಗಿಯೇ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನ ಭೇಟಿಯಾಗುತ್ತಿರೋದು ಪಕ್ಷದ ಪಡಸಾಲೆಯಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಮಂಗಳವಾರಷ್ಟೇ ಸಚಿವ ಸತೀಶ್ ಜಾರಕಿಹೊಳಿ ಸಹ ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನ ಭೇಟಿಯಾಗಿದ್ದಾರೆ ಎನ್ನಲಾಗಿದೆ ಈ ನಡುವೆ ಇಂದು ನವದೆಹಲಿಯಲ್ಲಿ ಕೆ ಸಿ ವೇಣುಗೋಪಾಲರನ್ನ ರಾಜಣ್ಣ ಭೇಟಿಯಾಗಿದ್ದು ಹಲವು ಪ್ರಶ್ನೆಗಳನ್ನ ಹುಟ್ಟು ಹಾಕುತ್ತಿದೆ.
ಪ್ರಮುಖವಾಗಿ ಭೇಟಿ ವೇಳೆ ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಸಂಬಂಧ ಚರ್ಚೆ ನಡೆದಿದೆ ಎನ್ನಲಾಗ್ತಿದೆ ಇದ್ರೆ ಜೊತೆಗೆ ಸಮುದಾಯವಾರು ಸಮಾವೇಶ ನಡೆಸೋದಕ್ಕೆ ಅನುವು ಮಾಡಿಕೊಡಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಇನ್ನೂ ಗೃಹ ಸಚಿವ ಪರಮೇಶ್ವರ್ ಮೊನ್ನೆ ಬೆಂಗಳೂರಿನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನ ಭೇಟಿಯಾಗಿ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಸಮಾಲೋಚನೆ ನಡೆಸಿದ್ದಾರೆ.
ದೇಶಾದ್ಯಂತ ಹಂತ ಹಂತವಾಗಿ ಪಿಸಿಸಿ ಅಧ್ಯಕ್ಷರನ್ನ ಬದಲಾವಣೆ ಮಾಡಿದ್ರೆ ರಾಜ್ಯದಲ್ಲೂ ಸಹ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡಿ ಎಂದು ಕೆಲ ನಾಯಕರು ಆಗ್ರಹಿಸುತ್ತಿದ್ದಾರೆ. ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮದಲ್ಲಿ ಕೆಪಿಸಿಸಿ ಸ್ಥಾನಕ್ಕೆ ಡಿಕೆಶಿ ಬದಲು ಬೇರೆಯವರನ್ನ ನೇಮಿಸಬೇಕು ಎನ್ನುವ ಪಟ್ಟು ಕೆಲವರದ್ದಾಗಿದೆ. ಈ ಎಲ್ಲಾ ಚರ್ಚೆಗಳ ನಡುವೆ ದಲಿತ ಸಚಿವರುಗಳು ಹೈಕಮಾಂಡ್ ನಾಯಕರನ್ನ ಭೇಟಿಯಾಗಿ ಸಮಾಲೋಚನೆ ನಡೆಸುತ್ತಿರೋದನ್ನ ನೋಡಿದರೆ ಎಲ್ಲೋ ಒಂದು ಕಡೆ ಶೀಘ್ರದಲ್ಲೇ ರಾಜ್ಯಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗಲಿದ್ಯಾ ಎಂಬ ಚರ್ಚೆ ಶುರುವಾಗಿದೆ.
-ಶರತ್ ಕಪ್ಪನಹಳ್ಳಿ, ಪಬ್ಲಿಕ್ ನೆಕ್ಸ್ಟ್ , ಪೊಲಿಟಿಕಲ್ ಬ್ಯೂರೋ
PublicNext
12/02/2025 06:36 pm