", "articleSection": "Politics,Government,News,Public News", "image": { "@type": "ImageObject", "url": "https://prod.cdn.publicnext.com/s3fs-public/421698-1739369723-A10~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ನವದೆಹಲಿ : ಬೆಂಗಳೂರಿನ ನಮ್ಮ‌ ಮೆಟ್ರೋ ಟಿಕೆಟ್ ದರ ಏರಿಕೆ ಬಗ್ಗೆ ಸಾರ್ವಜನಿಕರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ....Read more" } ", "keywords": "Delhi metro fare hike, Centre government response, Delhi state government, metro fare reduction, Tejaswi Surya, Karnataka politician, Delhi metro news, Indian transportation policy, urban development issues, public transportation costs.,,Politics,Government,News,Public-News", "url": "https://publicnext.com/node" } ನವದೆಹಲಿ: ರಾಜ್ಯ ಸರ್ಕಾರ ದರ ಪರಿಷ್ಕರಣೆ ಬಗ್ಗೆ ಕೇಂದ್ರಕ್ಕೆ ಪತ್ರ ಬರೆದ್ರೆ, ಮೆಟ್ರೋ ದರ ಇಳಿಕೆ - ತೇಜಸ್ವಿ ಸೂರ್ಯ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವದೆಹಲಿ: ರಾಜ್ಯ ಸರ್ಕಾರ ದರ ಪರಿಷ್ಕರಣೆ ಬಗ್ಗೆ ಕೇಂದ್ರಕ್ಕೆ ಪತ್ರ ಬರೆದ್ರೆ, ಮೆಟ್ರೋ ದರ ಇಳಿಕೆ - ತೇಜಸ್ವಿ ಸೂರ್ಯ

ನವದೆಹಲಿ : ಬೆಂಗಳೂರಿನ ನಮ್ಮ‌ ಮೆಟ್ರೋ ಟಿಕೆಟ್ ದರ ಏರಿಕೆ ಬಗ್ಗೆ ಸಾರ್ವಜನಿಕರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ. ಈ ಕುರಿತಂತೆ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಂಸದ ತೇಜಸ್ವಿ ಸೂರ್ಯ, ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಅಧಿಕಾರಿಗಳು ದರ ನಿಗಧಿ ಮಾಡಲು ಸಮಿತಿ ರಚಿಸುವ ಪ್ರಕ್ರಿಯೆ ಶುರು ಮಾಡಿದರು. ಮೆಟ್ರೋ ಕಂಪನಿ ಮತ್ತು ರಾಜ್ಯ ಸರ್ಕಾರ ದರ ಏರಿಕೆಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕು. ಅದರ ಆಧಾರದ ಮೇಲೆ ಕೇಂದ್ರ ಸರ್ಕಾರ ಸಮಿತಿ ರಚನೆ ಮಾಡುತ್ತೆ. ಸಮಿತಿ ರಾಜ್ಯ ಸರ್ಕಾರ ಹಾಗೂ ಬಿಎಂಆರ್‌ಸಿಎಲ್ ನಿಂದ ಮಾಹಿತಿ ಪಡೆದು ಪರಿಷ್ಕೃತ ದರ ಪಟ್ಟಿ ನಿಗಧಿ ಮಾಡುತ್ತೆ. ಸಮಿತಿ ಪರಿಷ್ಕರಣೆಯನ್ನು ಅನುಷ್ಠಾನ ಮಾಡಬೇಕು ಎಂದು ಕಾನೂನು ಹೇಳುತ್ತೆ.

ಮೆಟ್ರೋ ದರ ಏರಿಕೆ ಕೇಂದ್ರ ಸರ್ಕಾರದ ಮಾಡಿದೆ ಎಂದು ಸಿಎಂ ಹೇಳಿದ್ದಾರೆ. ಆದರೆ ದರ ಪರಿಷ್ಕರಣೆಗೆ ಪತ್ರ ಬರೆದಿದ್ದೆ ರಾಜ್ಯ ಸರ್ಕಾರ ಇದನ್ನು ಅವರು ಹೇಳ್ತಿಲ್ಲ. ಬರೀ ಮೆಟ್ರೋ ಅಲ್ಲ ನೋಂದಣಿ ಶುಲ್ಕ, ವಾಹನ ನೋಂದಣಿ, ಆಸ್ಪತ್ರೆ ಸೇವಾ ಶುಲ್ಕ, ಕಾಲೇಜು ಫಿ, ಎಲೆಕ್ಟ್ರಿಕ್ ವಾಹನಗಳ ಮೇಲೂ ತೆರಿಗೆ ಹಾಕಿದೆ. ಮೆಟ್ರೋ ದರ ಏರಿಸಿ ಎಂದು ಪತ್ರ ಬರೆದಿದ್ದು ರಾಜ್ಯ ಸರ್ಕಾರ. ಇದೀಗ ರಾಜ್ಯ ಸರ್ಕಾರ ಮತ್ತೊಮ್ಮೆ ಪತ್ರ ಬರೆದರೆ ಮತ್ತೊಮ್ಮೆ ದರ ಪರಿಷ್ಕರಣೆ ಮಾಡಲು ಮನವಿ ಮಾಡಿದರೆ ಮತ್ತೊಮ್ಮೆ ಸಮಿತಿ ರಚಿಸುವ ಭರವಸೆ ನೀಡಿದ್ದಾರೆ. ಹೀಗಾಗೀ ರಾಜ್ಯ ಸರ್ಕಾರದಿಂದ ಸಿಎಂ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಸಬೇಕು. ಇದರಿಂದ ಮಾತ್ರ ದರ ಇಳಿಕೆ ಸಾಧ್ಯ. ಈ ನಿಟ್ಟಿನಲ್ಲಿ ನಾವು ಒಟ್ಟಾಗಿ ಕೆಲಸ ಮಾಡಬೇಕಿದೆ ಎಂದರು.

Edited By : Suman K
PublicNext

PublicNext

12/02/2025 07:49 pm

Cinque Terre

17.12 K

Cinque Terre

4

ಸಂಬಂಧಿತ ಸುದ್ದಿ