ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರಯತ್ನ ವಿಫಲವಾಗಬಹುದು, ಆದರೆ ಪ್ರಾರ್ಥನೆಗೆ ಗೆಲುವು ನಿಶ್ಚಿತ - ಡಿ.ಕೆ ಶಿವಕುಮಾರ್ ಮಾರ್ಮಿಕವಾಗಿ ಪೋಸ್ಟ್ ..!

ಬೆಂಗಳೂರು: ಪ್ರಯತ್ನ ವಿಫಲವಾಗಬಹುದು, ಆದರೆ ಪ್ರಾರ್ಥನೆಗೆ ಗೆಲುವು ನಿಶ್ಚಿತ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಮಾರ್ಮಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

'ತಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗಿಯಾಗಿ ಗಂಗಾ ಆರತಿ ನೆರವೇರಿಸಿ, ಭಗವಂತನಲ್ಲಿ ಪ್ರಾರ್ಥಿಸಿದೆ. ಪುಣ್ಯಸ್ನಾನ ಮಾಡಿ ಭಕ್ತಿ-ಭಾವಗಳಲ್ಲಿ ಮಿಂದು ಭಾವಪರವಶನಾದೆ' ಎಂದು ಡಿಸಿಎಂ ಡಿಕೆ‌ ಶಿವಕುಮಾರ್ ಪೋಸ್ಟ್ ಮಾಡಿದ್ದಾರೆ.

ಆದ್ರೆ ಈ ಪೋಸ್ಟ್‌ನಲ್ಲಿ ಪ್ರಯತ್ನ ವಿಫಲವಾಗಬಹುದು, ಆದರೆ ಪ್ರಾರ್ಥನೆಗೆ ಗೆಲುವು ನಿಶ್ಚಿತ ಎಂಬ ಎರಡು ಲೈನ್ ಚರ್ಚೆಗೆ ಗ್ರಾಸವಾಗಿದೆ. ಡಿಕೆ ಶಿವಕುಮಾರ್ ಯಾಕೆ ಪೋಸ್ಟ್ ಹಾಕಿದ್ರು ಯಾರಿಗೆ ಏನು ಸಂದೇಶ ಕೊಡಲು ಹಾಕಿದ್ದಾರೆ ಎಂಬ ಚರ್ಚೆ ಶುರುವಾಗಿದೆ. ಸದ್ಯಕ್ಕೆ ಪವರ್ ಶೇರಿಂಗ್ ಬಗ್ಗೆ ಕಾಂಗ್ರೆಸ್‌ನೊಳಗೆ ಗೊಂದಲ ಇದೆ ಈ ನಡುವೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ಕುರಿತಂತೆ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಅಲ್ಲದೇ ದಲಿತ ಸಚಿವರು ಸಹ ಹೈಕಮಾಂಡ್ ನಾಯಕರನ್ನ ಭೇಟಿಯಾಗಿ ಬರ್ತಿದ್ದಾರೆ. ಇದ್ರ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ತಮ್ಮ ಸಾಮಾಜಿಕ ‌ಜಾಲತಾಣದಲ್ಲಿ ಈ ಪೋಸ್ಟ್ ಹಾಕಿರೋದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

Edited By : Nagaraj Tulugeri
PublicNext

PublicNext

12/02/2025 10:23 pm

Cinque Terre

17.53 K

Cinque Terre

0

ಸಂಬಂಧಿತ ಸುದ್ದಿ