ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಜನಿಕಾಂತ್ ನಟನೆಯ 'ಕೂಲಿ' ಸಿನಿಮಾದ ಟೈಟಲ್ ಟೀಸರ್ ರಿಲೀಸ್ - ಫ್ಯಾನ್ಸ್‌ ಫಿದಾ

ಬೆಂಗಳೂರು: ಸೂಪರ್‌ ಸ್ಟಾರ್‌ ರಜನಿಕಾಂತ್ ನಟನೆಯ 'ಕೂಲಿ' ಸಿನಿಮಾದ ಟೈಟಲ್ ಟೀಸರ್ ಬಿಡುಗಡೆಯಾಗಿದ್ದು, ಅಭಿಮಾನಿಗಳು ರಜನಿಕಾಂತ್ ಎಂಟ್ರಿಕೆ ಫಿದಾ ಆಗಿದ್ದಾರೆ.

ನಟ ರಜನಿಕಾಂತ್ ಅವರು 73ನೇ ವಯಸ್ಸಿನಲ್ಲೂ ದಣಿವರಿಯದ ಯುವಕನಂತೆ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಅವರು ನಟಿಸಲಿರುವ 171ನೇ ಸಿನಿಮಾದ ಮೇಲೆ ಬಹಳ ನಿರೀಕ್ಷೆ ಇದೆ. ಈ ಸಿನಿಮಾದ ಟೈಟಲ್​ ಈಗ ಅನಾವರಣ ಆಗಿದೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಲೋಕೇಶ್​ ಕನಗರಾಜ್​ ಅವರು ನಿರ್ದೇಶನ ಮಾಡುತ್ತಿದ್ದಾರೆ. ಶೀಘ್ರದಲ್ಲೇ ಇದರ ಶೂಟಿಂಗ್​ ಆರಂಭ ಆಗಲಿದೆ. ಸದ್ಯಕ್ಕೆ ಟೈಟಲ್​ ಟೀಸರ್​ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾಗೆ ‘ಕೂಲಿ’ (Coolie) ಎಂದು ಶೀರ್ಷಿಕೆ ಇಡಲಾಗಿದೆ. ಟೈಟಲ್​ ಟೀಸರ್​ ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ.

PublicNext

PublicNext

13 days ago

Cinque Terre

38.83 K

Cinque Terre

0