ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಎನ್ಎಂಪಿಎಗೆ ಆಗಮಿಸಿತು ಈ ಋತುವಿನ 8ನೇ ಐಷಾರಾಮಿ ಕ್ರೂಸ್ ಹಡಗು "MS INSIGNIA"

ಮಂಗಳೂರು: ಈ ಋತುವಿನ 8ನೇ ಐಷಾರಾಮಿ ಪ್ರವಾಸಿ ಕ್ರೂಸ್ ಹಡಗು ರವಿವಾರ ನವ ಮಂಗಳೂರು ಬಂದರು ಪ್ರಾಧಿಕಾರಕ್ಕೆ ಆಗಮಿಸಿದೆ.

"MS INSIGNIA" ಎಂಬ ಹೆಸರಿನ ನಾರ್ವೇಜಿಯನ್ ಕ್ರೂಸ್ ಲೈನರ್ 509 ಪ್ರಯಾಣಿಕರು ಮತ್ತು 407 ಸಿಬ್ಬಂದಿಯನ್ನು ಹೊತ್ತು ಬಂದರಿಗೆ ಆಗಮಿಸಿದೆ. ಹಡಗಿನಿಂದ ಇಳಿದ ಪ್ರಯಾಣಿಕರಿಗೆ ನವ ಮಂಗಳೂರು ಬಂದರು ಪ್ರಾಧಿಕಾರದ ವತಿಯಿಂದ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು.

ಪ್ರವಾಸಿಗರಿಗೆ ಕರಾವಳಿಯ ಪ್ರಸಿದ್ಧ ಪ್ರವಾಸಿ ತಾಣಗಳು, ದೇವಾಲಯ, ಮಾರುಕಟ್ಟೆ ಮತ್ತು ಅಂಗಡಿಗಳಿಗೆ ತೆರಳಲು ಅನುಕೂಲವಾಗುವಂತೆ ಬಸ್ ಮತ್ತು ಟ್ಯಾಕ್ಸಿ ವ್ಯವಸ್ಥೆ ಮಾಡಲಾಗಿತ್ತು. ಆಯುಷ್ ಸಚಿವಾಲಯವು ಸ್ಥಾಪಿಸಿದ ಕೇಂದ್ರದಲ್ಲಿ ಪ್ರಯಾಣಿಕರು ಧ್ಯಾನದ ಅನುಭವ ಪಡೆದುಕೊಂಡರು. ತುಳುನಾಡಿನ ಯಕ್ಷಗಾನ, ಭರತನಾಟ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ನೃತ್ಯ ಕಾರ್ಯಕ್ರಮಗಳು ಪ್ರವಾಸಿಗರನ್ನು ರಂಜಿಸಿದವು. ವಿಶಿಷ್ಟ ಸೆಲ್ಫಿ ಸ್ಟ್ಯಾಂಡ್ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿತ್ತು.

ಪ್ರವಾಸಿಗರು ಕಾರ್ಕಳ ಗೋಮಟೇಶ್ವರ ದೇವಸ್ಥಾನ, ಮೂಡುಬಿದಿರೆಯ ಸಾವಿರ ಕಂಬಗಳ ಬಸದಿ, ಸೋನ್ಸ್ ಫಾರ್ಮ್ಸ್, ಅಚಲ್ ಗೋಡಂಬಿ ಕಾರ್ಖಾನೆ, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ, ಸಂತ ಅಲೋಶಿಯಸ್ ಚಾಪೆಲ್, ಸ್ಥಳೀಯ ಮಾರುಕಟ್ಟೆ ಮತ್ತು ನಗರದ ಸಾಂಪ್ರದಾಯಿಕ ಮನೆಗಳಂತಹ ವಿವಿಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡಿದರು. ಈ ಹಡಗು ಸಂಜೆ 7ಗಂಟೆಗೆ ಮೊರ್ಮುಗೋವಾದ ಕಡೆಗೆ ಪ್ರಯಾಣ ಬೆಳೆಸಿತು.

Edited By : Nagaraj Tulugeri
PublicNext

PublicNext

05/05/2024 10:52 pm

Cinque Terre

32.07 K

Cinque Terre

0

ಸಂಬಂಧಿತ ಸುದ್ದಿ