ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ: ಕಂಪೆನಿಯ ಯೂಸರ್‌ನೇಮ್ ಹ್ಯಾಕ್ ಮಾಡಿ 21. 14 ಲಕ್ಷ ರೂ. ವಂಚನೆ !

ಕಾರ್ಕಳ: ಕಂಪೆನಿಯ ಯೂಸರ್ ನೇಮ್ ಹ್ಯಾಕ್ ಮಾಡಿ ಇಂಡಿಯನ್ ಆರ್ಮಿಯ ವೆಬ್‌ಸೈಟ್‌ನಲ್ಲಿ ಬಿಡ್ ಮಾಡುವ ಮೂಲಕ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆದಿಂಜೆ ಗ್ರಾಮದ ಬೋಳಾಸ್ ಅಗ್ರೋ ಪ್ರೈವೇಟ್ ಲಿಮಿಟೆಡ್ ಕಂಪನಿಯ ಮಾಲಕ ರಾಹುಲ್ ಎಂಬವರು ಇಂಡಿಯನ್ ಆರ್ಮಿಗೆ ಬಾದಾಮಿ ಪೂರೈಕೆ ಮಾಡುವ ಬಗ್ಗೆ ಭಾರತ ಸರಕಾರದ ಮಾನ್ಯತೆ ಪಡೆದ gem.gov.in ವೆಬ್‌ಸೈಟ್‌ನಲ್ಲಿ ಬಹಿರಂಗ ಹರಾಜಿನಲ್ಲಿ 5,12,500 ರೂ. ಹಣಕ್ಕೆ ಬಿಡ್ ಮಾಡಿದ್ದರು.

ಆರೋಪಿಗಳು ಬೋಳಾಸ್ ಅಗ್ರೋ ಪ್ರೈವೇಟ್ ಲಿಮಿಟೆಡ್ ಕಂಪನಿಯ ಯೂಸರ್ ನೇಮ್ ಹ್ಯಾಕ್ ಮಾಡಿ ಕಂಪನಿಯ ಹೆಸರನ್ನು ದುರುಪಯೋಗ ಪಡಿಸಿಕೊಂಡು, ಕಂಪನಿಯ ಹೆಸರಿನಲ್ಲಿ ಒಟ್ಟು 21,14,731 ರೂ.ಗೆ ಇಂಡಿಯನ್ ಆರ್ಮಿಯ ವೆಬ್‌ಸೈಟ್‌ನಲ್ಲಿ ಬಿಡ್‌ ಮಾಡಿ ವಂಚಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

Edited By : PublicNext Desk
Kshetra Samachara

Kshetra Samachara

06/05/2024 11:50 am

Cinque Terre

2.29 K

Cinque Terre

0

ಸಂಬಂಧಿತ ಸುದ್ದಿ