ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ - ಮಹಿಳಾ ಕಾಂಗ್ರೆಸ್ ನಿಂದ ಪೊರಕೆ ಹಿಡಿದು ಪ್ರತಿಭಟನೆ

ಉಡುಪಿ : ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಖಂಡಿಸಿ ಹಾಗೂ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಮಹಿಳೆಯರು ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಪೊರಕೆ ಹಿಡಿದು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ವಕ್ತಾರೆ ವರೋನಿಕಾ ಕರ್ನೆಲಿಯೋ, ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದಿಂದ ಇಡೀ ಸಮಾಜವೇ ತಲೆತಗ್ಗಿಸುವಂತಾಗಿದೆ. ಪುರುಷರು ಮಹಿಳೆಯರ ಬಗ್ಗೆ ಸಂಶಯದಿಂದ ನೋಡುವಂತಾಗಿದೆ. ಈತನ ಕರ್ಮಕಾಂಡ ಯಾರನ್ನೂ ಬಿಟ್ಟಿಲ್ಲ. ವೃದ್ಧೆಯರನ್ನೂ ಬಿಡದೆ ಅತ್ಯಾಚಾರ ಎಸಗಿರುವ ಈತ ದೊಡ್ಡ ಕ್ರಿಮಿನಲ್. ಇದಕ್ಕೆ ನ್ಯಾಯ ಸಿಗಲೇಬೇಕು. ಸರಕಾರ ಈ ಬಗ್ಗೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಆತನನ್ನು ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಗೀತಾ ವಾಗ್ಳೆ, ಕಾಂಗ್ರೆಸ್ ಉಡುಪಿ ಜಿಲ್ಲಾ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ಮೊದಲಾದವರು ಉಪಸ್ಥಿತರಿದ್ದರು.

Edited By : Suman K
PublicNext

PublicNext

09/05/2024 01:56 pm

Cinque Terre

40.82 K

Cinque Terre

4